Visit Channel

ಜಪಾನ್ ಭೂಕುಸಿತ: 80 ಮಂದಿ ನಾಪತ್ತೆ

file7gi4uunyaqq5mu6190c1625383786

ಟೋಕಿಯೊ, ಜು. 05: ಜಪಾನ್‌ನ ಅಟಾಮಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ 80 ಮಂದಿ ನಾಪತ್ತೆಯಾಗಿದ್ದು, ಸೋಮವಾರವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಕೆಟ್ಟ ಹವಾಮಾನದ ನಡುವೆಯೂ ರಕ್ಷಣಾ ಸಿಬ್ಬಂದಿ ಭಗ್ನಾವಶೇಷಗಳಡಿ ಸಿಲುಕಿದ ಜನರಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಹಲವು ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿದೆ. ಸೋಮವಾರದ ವೇಳೆಗೆ ರಕ್ಷಣಾ ಸಿಬ್ಬಂದಿ ಸಂಖ್ಯೆ 1500ಕ್ಕೆ ಏರಿಕೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಇನ್ನಷ್ಟು ಸಿಬ್ಬಂದಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದರು.

36,000 ಜನರು ಇರುವ ಅಟಾಮಿ ನಗರದಲ್ಲಿ 113 ಮಂದಿ ನಾಪತ್ತೆಯಾಗಿರುವ ಸಾಧ್ಯತೆಗಳಿವೆ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ ಎಂಬುದಾಗಿ ವಕ್ತಾರ ಹಿರೊಕಿ ಒನುಮಾ ಅವರು ಭಾನುವಾರ ಮಾಹಿತಿ ನೀಡಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ನಾಪತ್ತೆಯಾದವರ ಸಂಖ್ಯೆ 80ಕ್ಕೆ ಇಳಿಕೆಯಾಗಿದೆ ಎಂದು ಜಪಾನ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಟಾಮಿಯಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ 130 ಮನೆಗಳು ಹಾನಿಗೊಳಗಾಗಿವೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.