ಬೆಂಗಳೂರು, ಜು. 29: ಕೃಷ್ಣ ಮೇಲ್ದಾಂಡೆ, ಮೇಕೆದಾಟು, ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ.
ಇಂದು ಮಧ್ಯಾಹ್ನ ಮೂರು ಗಂಟೆಯಿಂದ ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆ ನಡೆಸಲಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಕೇವಲ ಐದು ಜನರು ಮಾತ್ರ ಈ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಈ ಕುರಿತು ಮಾತನಾಡಿರುವ ಮಾಜಿ ಸಿಎಂ, ಕೇಂದ್ರದಲ್ಲಿ ರಾಜ್ಯದ ನೀರಾವರಿ ಯೋಜನೆ ಕುರಿತು ನೋಟಿಫೀಕೆಶನ್ ಆಗಿಲ್ಲ. ಮೇಕೆದಾಟಿನ ವಿಚಾರದಲ್ಲೂ ಬ್ಯಾಲೆನ್ಸಿಂಗ್ ರಿಸರ್ವ್ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಈ ಬಗ್ಗೆ ಚರ್ಚೆ ಮಾಡುತ್ತೇನೆ ಇದ್ದೇವೆ ಆದರೆ ಆಗುತ್ತಿಲ್ಲ. ರಾಜ್ಯದ ಜನತೆಯ ಬಗ್ಗೆ ಕೇಂದ್ರ ಚೆಲ್ಲಾಟವಾಡುತ್ತಿದೆ. ಇದೇ ಹಿನ್ನಲೆ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮೆಮೋರಂಡನ್ ಕೊಡುತ್ತೇವೆ. ಪ್ರಧಾನಿಗಳಿಗೂ ಆ ಕಾಪಿ ಕಳಿಸುತ್ತೇವೆ ಎಂದರು.
ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ಪ್ರತಿಭಟನೆ ಬಳಿಕ ಈ ಕಾಲ್ನಡಿಗೆ ಜಾಥಾ ನಡೆಯಲಿದೆ. ಈ ಪ್ರತಿಭಟನೆಯಲ್ಲಿ, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ, ಶಾಸಕ ಸುರೇಶ್ ಗೌಡ, ಹೆಚ್.ಕೆ.ಕುಮಾರಸ್ವಾಮಿ, ದಾಸರಹಳ್ಳಿ ಶಾಸಕ ಮಂಜುನಾಥ್, ಡಿಸಿ ತಮ್ಮಣ್ಣ, ಸಾ.ರಾ.ಮಹೇಶ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮೊದಲನೇ ಹಂತದಲ್ಲಿ ನಮ್ಮ ಪಕ್ಷದ ವತಿಯಿಂದ ಇಂದು ಪ್ರಸ್ತಾವನೆ ಕೊಡುತ್ತೇವೆ. ಕೇಂದ್ರ ಯಾವ ರೀತಿ ಪ್ರತಿಕ್ರಿಯಿಸುತ್ತದೆ ನೋಡಿಕೊಂಡು ನಂತರ ನಮ್ಮ ತೀರ್ಮಾನ ಮಾಡುತ್ತೇವೆ. ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಆಗುತ್ತದೆ ಎನ್ನುವುದನ್ನು ನಾವು ರಾಷ್ಟ್ರಪತಿಗಳಿಗೆ ತಿಳಿಸುತ್ತೇವೆ ಎಂದರು.
ನಮ್ಮ ರಾಜ್ಯದ ನದಿಯ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಮೇಕದಾಟು ಯೋಜನೆಯಲ್ಲಿ ತಾರತಮ್ಯ ತೋರುತ್ತಿದೆ. ಮಹದಾಯಿ ಯೋಜನೆಯ ತೀರ್ಪು ಬಂದಿದೆ. ಇದ್ರಲ್ಲಿ ಗೆಜೆಟ್ ನೋಟಿಫಿಕೇಷನ್ ಆಗಿದೆ ಇದ್ರ ವರದಿ ಕೊಡಲು ಮುಂದಾಗಿಲ್ಲ. ತೆಲಂಗಾಣದ ಅರ್ಜಿಯ ಸಬೂಬು ಕೊಡುತ್ತಿದೆ. ಕರ್ನಾಟಕದ ವ್ಯವಸ್ಥೆಯಲ್ಲಿ ಆಗುತ್ತಿರುವ ತಾರತಮ್ಯ ಕುರಿತು ತಿಳಿಸುತ್ತೇವೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ನಿಟ್ಟಿನಲ್ಲಿ ಕೆಲಸ ಮಾಡಬೇಕು
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀರಾವರಿ ಬಗ್ಗೆ ಅರಿವಿದೆ. ಅಪ್ಪರ್ ಕೃಷ್ಣದಲ್ಲಿಯೂ ಸೆಂಟ್ರಲ್, ನೋಟಿಫಿಕೇಷನ್ ಆಗಿಲ್ಲ ಈ ಬಗ್ಗೆ ಕೇಂದ್ರದ ಗಮನಕ್ಕೆ ತರಬೇಕು. ಬಸವರಾಜ ಬೊಮ್ಮಾಯಿಯವರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ. ಅವರು ನೀರಾವರಿ ಸಚಿವರಾಗಿದ್ದರು ಅವರಿಗೆ ಈ ಬಗ್ಗೆ ಹೆಚ್ಚಿನ ತಿಳುವಳಿಕೆ ಇದೆ. ಹೆಚ್ಚುವರಿ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ. ಇದು ಜನರ ಬಳಕೆಗೆ ಬಾರದೆ ಹರಿದು ಹೋಗುತ್ತಿದೆ. ಈ ಬಗ್ಗೆ ಬೊಮ್ಮಾಯಿ ಅವರು ಯೋಚನೆ ಮಾಡಬೇಕು ಎಂದು ಆಗ್ರಹಿಸಿದರು.