ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಪ್ರಕಾಶ್ ರೈ ಈಚೆಗಷ್ಟೇ ಸ್ಥಾಪಿಸಿದ ‘ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಕೈ ಸರಕಾರ..!

ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ ‘ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ (JDS Against Prakash Raj-Congress) ಸರಕಾರ. ನಿಮ್ಮ ಜೋಳಿಗೆ ಭರ್ತಿ

ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ನಟ ಪ್ರಕಾಶ್ ರಾಜ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ (JDS) ತೀವ್ರ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಮೊರಾರ್ಜಿ ವಸತಿ ಶಾಲೆ (Morarji Residential School) ಗಳಷ್ಟೇ ಅಲ್ಲ, ಸರಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರಕಾರಕ್ಕೆ ಕೈ ಬರುತ್ತಿಲ್ಲ.

ಅಲ್ಲಿನ ಮಕ್ಕಳಿಗೆ ಒಳ್ಳೇ ಆಹಾರವಿಲ್ಲ, ನೀರೂ ಇಲ್ಲ. ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ ‘ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಸರಕಾರ. ನಿಮ್ಮ ಜೋಳಿಗೆ ಭರ್ತಿ

ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್ (JDS Against Prakash Raj-Congress) ರಾಜ್ (Prakash Raj) ಅವರೇ ಎಂದು ಪ್ರಶ್ನಿಸಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ ಪ್ರಕಾಶ್ರಾಜ್ ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ. ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ

ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ಪ್ರಶ್ನಿಸಿದೆ.

ಗ್ಯಾರಂಟಿಗಳ (Guarantee) ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಸಿಫ್ರಂಟ್ ಎಂಬ ಮಟ್ಟು-ಪಟ್ಟಿನ ಕಳ್ಳಕಂಪನಿಗೆ ಕೋಟಿ ಕೋಟಿ ಸುರಿದಿರುವ ಕಾಂಗ್ರೆಸ್ ಸರಕಾರ, ನಿಮ್ಮ ‘ನಿರ್ದಿಗಂತʼಕ್ಕೂ ಹಣ

ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯೋರು ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವೋರು ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!! ಹೆಂಗೆ?

Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ಟೀಕಿಸಿದೆ.

ಇದನ್ನು ಓದಿ: ಸಿದ್ದು-ಡಿಕೆಯ ಅತಿಯಾದ ಓಲೈಕೆಯಿಂದಲೇ ಮತಾಂಧ ಬ್ರದರ್ಸ್ಗಳು ಕಾನೂನು ಕೈಗೆತ್ತಿಕೊಳ್ಳುತ್ತಿದ್ದಾರೆ – ಬಿಜೆಪಿ ವಾಗ್ದಾಳಿ

Exit mobile version