ಅರಸೀಕೆರೆ : ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ!

bjp

ರಾಜ್ಯಸಭಾ ಚುನಾವಣೆ(Rajyasabha Election) ಗೆಲ್ಲಲ್ಲು ಕಾಂಗ್ರೆಸ್(Congress), ಬಿಜೆಪಿ(BJP) ಮತ್ತು ಜೆಡಿಎಸ್ ಪಕ್ಷಗಳ(JDS Party) ನಾಯಕರು ತೀವ್ರ ಹೋರಾಟ ನಡೆಸುತ್ತಿದ್ದರೆ,

ಇನ್ನೊಂದೆಡೆ ಜೆಡಿಎಸ್-ಬಿಜೆಪಿ(JDS-BJP) ಕಾರ್ಯಕರ್ತರು ರಾಜಕೀಯ(Politics) ಕಾರಣಗಳಿಗಾಗಿ ಕಲ್ಲುತೂರಾಟ ನಡೆಸಿರುವ ಘಟನೆ ಹಾಸನ(Hassan) ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ(Arasikere) ಅಮ್ಮನಹಟ್ಟಿ ಗ್ರಾಮದಲ್ಲಿ ರಾಜಕೀಯ ವೈಷಮ್ಯದಿಂದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಗಾಯಾಳುಗಳನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಕೀಯ ವೈರತ್ವದ ಕಾರಣದಿಂದ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಬೆಂಬಲಿಗರ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ, ಮನೆಗಳಿಗೆ ಹಾನಿ ಮಾಡಿದ್ದಾರೆ ಎಂದು ಅಮ್ಮನಹಟ್ಟಿ ಗ್ರಾಮದ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಇನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ(BS Yedurappa) ರಾಜಕೀಯ ಕಾರ್ಯದರ್ಶಿಯಾಗಿದ್ದ ಎನ್.ಆರ್.ಸಂತೋಷ ಅವರು ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಕೆಲವು ತಿಂಗಳಿಂದ ಪುಲ್‍ ಆಕ್ಟಿವ್ ಆಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಂತೋಷ ತಯಾರಿ ನಡೆಸಿದ್ದಾರೆ.

ಅರಸೀಕೆರೆ ಕ್ಷೇತ್ರದಾದ್ಯಂತ ಬಿಜೆಪಿ ಪಕ್ಷವನ್ನು ಸಂಘಟಿಸುತ್ತಿದ್ದಾರೆ. ಹೀಗಾಗಿ ಅರಸೀಕೆರೆ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಈಗ ಬಿಜೆಪಿ ಬೆಂಬಲಿತ ಗುಂಪುಗಳು ರೂಪಗೊಂಡಿವೆ. ಈ ಬೆಳವಣಿಗೆ ರಾಜಕೀಯ ತಿಕ್ಕಾಟಗಳಿಗೆ ಕಾರಣವಾಗಿದೆ. ಎನ್.ಆರ್ ಸಂತೋಷ ಅಮ್ಮನಹಟ್ಟಿ ಗ್ರಾಮಕ್ಕೆ ಭೇಟಿ ನೀಡಿರುವ ವೇಳೆಯೇ ಈ ಕಲ್ಲುತೂರಾಟ ನಡೆದಿದ್ದು, ಇದೊಂದು ಪೂರ್ವನಿಯೋಜಿತ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅರಸೀಕೆರೆ ಗ್ರಾಮಾಂತರ ಪೊಲೀಸ್‍ರು ಎರಡು ಪಕ್ಷಗಳ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Exit mobile version