- ಜೆಡಿಎಸ್ ಪಕ್ಷದಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ (JDS protest against govt)ಅಭಿಯಾನ
- ಏಪ್ರಿಲ್ 12 ರಂದು ಬೃಹತ್ ಪ್ರತಿಭಟನೆ
- ಬಿಜೆಪಿಯ ಜನಾಕ್ರೋಶ ಯಾತ್ರೆ ನಂತರದಲ್ಲಿ ಹೆಚ್ಚು ಆಕ್ಟಿವ್ ಆಗಿರುವ ಜೆಡಿಎಸ್
Bengaluru: ರಾಜ್ಯ ಕಾಂಗ್ರೆಸ್ ಸರ್ಕಾರದ ದರ ಏರಿಕೆ, ಭ್ರಷ್ಟಾಚಾರ ಆರೋಪಗಳ ವಿರುದ್ಧ ಪ್ರತಿಪಕ್ಷಗಳು ಸಿಡಿದೆದ್ದಿವೆ. ಅದರಲ್ಲೂ ಜೆಡಿಎಸ್ ಪಕ್ಷ ಸರ್ಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಬಿಜೆಪಿ ಹಳೇ ಮೈಸೂರು (Mysore) ಭಾಗದಲ್ಲಿ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಕೂಡ ಆ್ಯಕ್ಟಿವ್ ಆಗಿದೆ.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಅವರ ನೇತೃತ್ವದಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ತೀವ್ರ ಸಂಚಲನ ಸೃಷ್ಟಿಸಿದೆ. ಈ ಅಭಿಯಾನದ ಬಗ್ಗೆ ಜೆಪಿ ಭವನದಲ್ಲಿ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು, https://www.saakappasaaku.com ಎಂಬ ನೂತನ ವೆಬ್‌ಸೈಟ್ ಅನ್ನು ಲೋಕಾರ್ಪಣೆ ಮಾಡಿದ್ದಾರೆ.
ಇನ್ನು ಈ ವೆಬ್ ತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮಾತ್ರವಲ್ಲ, ರಾಜ್ಯದ ಯಾರೇ ಆದರೂ ನೋಂದಣಿ ಮಾಡಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಜನರ ಮೇಲೆ ಬೆಲೆ ಏರಿಕೆ ಬರೆ (Price Hike) ಎಳೆಯುತ್ತಿದೆ.
ಆರ್ಥಿಕವಾಗಿ ರಾಜ್ಯವನ್ನು ವಿಕೋಪದ ಪರಿಸ್ಥಿತಿಗೆ ದೂಡಿರುವ ಕಾಂಗ್ರೆಸ್ ಸರಕಾರವು, ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಸೃಷ್ಟಿಸಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ನಾಡಿನ ಜನರನ್ನು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಸಂಕಷ್ಟಕ್ಕೆ ದೂಡಿದೆ. ನಿರಂತರವಾಗಿ ಶೋಷಣೆ ಮಾಡುತ್ತಿದೆ. ಜನರು ರೋಸಿ ಹೋಗಿದ್ದಾರೆ.
ಇನ್ನೆಷ್ಟು ದಿನ ಇದನ್ನು ಸಹಿಸಿಕೊಳ್ಳಬೇಕು. ಅದಕ್ಕೆ ನಾವು ಹೋರಾಟಕ್ಕೆ ಧುಮುಕಿದ್ದೇವೆ. ನಾವು ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಸಾಕು ಎಂಬ (JDS protest against govt) ಅಭಿಯಾನ ಶುರು ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ : ರಾಹುಲ್ ಗಾಂಧಿ ಪ್ರಧಾನಿ ಆಗಿದ್ರೆ, ಅಡುಗೆ ಅನಿಲದ ಬೆಲೆ ರೂ.2,500 ಮೀರುತ್ತಿತ್ತು:ಬಿ.ವೈ. ವಿಜಯೇಂದ್ರ ಟೀಕೆ
ರಾಜ್ಯ ಸರ್ಕಾರ ಕಳೆದ ಎರಡು ವರ್ಷಗಳಿಂದ ಇಲ್ಲಿವರೆಗೂ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ಹಂತ ಹಂತವಾಗಿ ಯಾವುದಾದರು ಒಂದು ರೀತಿ ಜನರ ಮೇಲೆ ಬೆಲೆ ಏರಿಕೆ ಮಾಡಿದೆ. ನಾಡಿನ ಜನರಿಗೆ ಸಂಕಷ್ಟದ ದಿನ ಎದುರಿಸಲು ಸರ್ಕಾರ ದೂಡಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಚರ್ಚೆಗಳು ರಾಜ್ಯದಲ್ಲಿ ಆಗ್ತಿದೆ. ಜೆಡಿಎಸ್ ಪಕ್ಷ ಕೂಡ ಪ್ರತಿಯೊಬ್ಬ ಕನ್ನಡಿಗರ ಭಾವನೆ ಹೊರಗೆ ಹಾಕೋ ಕೆಲಸ ಮಾಡ್ತಿದೆ ಎಂದು ಅವರು ತಿಳಿಸಿದರು.
ಇಂದು ಬೆಳಗ್ಗೆಯಿಂದ ನಮ್ಮ ಕಾರ್ಯಕರ್ತರು ಕುಮಾರಣ್ಣನ (HD Kumaraswamy) ಅವರ ಸಲಹೆ ಮತ್ತು ಸೂಚನೆ ಪಡೆದುಕೊಂಡು ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ ಇಂದಿನಿಂದ ಪ್ರಾರಂಭ ಮಾಡಿದ್ದೇವೆ. ಏಳೂವರೆ ಕೋಟಿ ಜನರ ಭಾವನೆ ಸಾಕಪ್ಪ ಸಾಕು ಅಂತ ಇದೆ ಎಂದು ನಿಖಿಲ್ ತಿಳಿಸಿದ್ದಾರೆ.
ಹಾಗಾಗಿ ಏಪ್ರಿಲ್ 12 (April 12) ಅಂದ್ರೆ ಇದೇ ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಬೃಹತ್ ಹೋರಾಟ ಮಾಡಲಿದೆ. ಹೆಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಅಭಿಯಾನದ ಮೂಲಕ ಪ್ರತಿಭಟನೆ ಮಾಡ್ತೀವಿ. ಕುಮಾರಣ್ಣ ಅವರು ಪ್ರತಿಭಟನೆಯಲ್ಲಿ ಭಾಗಿಯಾಗ್ತಾರೆ. ನಿರಂತರವಾಗಿ ಈ ಅಭಿಯಾನವನ್ನ ಜೆಡಿಎಸ್ ಮಾಡುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಅಲ್ಲದೆ ಬಿಜೆಪಿ ಜೊತೆ ಜೆಡಿಎಸ್ ಮರ್ಜ್ ಆಗೋ ಪ್ರಶ್ನೆ ಇಲ್ಲ. ಪಕ್ಷವನ್ನ ಕಟ್ಟಿ ಬೆಳೆಸಿದ ಸಾವಿರಾರು ಕಾರ್ಯಕರ್ತರು ಇದ್ದಾರೆ. ನಾವು ರಾಜ್ಯದ,ದೇಶದ ಹಿತಕ್ಕಾಗಿ ಮೈತ್ರಿ ಅಗಿದ್ದೇವೆ ಜೆಡಿಎಸ್ ಮರ್ಜ್ ಆಗೋದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.