• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಾರಾಯಿ, ಲಾಟರಿ ನಿಷೇಧ ಮಾಡಿ ಹಳ್ಳಿ ತಾಯಂದಿರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ – ಕೈಗೆ ದಳ ಟಾಂಗ್

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸಾರಾಯಿ, ಲಾಟರಿ ನಿಷೇಧ ಮಾಡಿ ಹಳ್ಳಿ ತಾಯಂದಿರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ – ಕೈಗೆ ದಳ ಟಾಂಗ್
0
SHARES
89
VIEWS
Share on FacebookShare on Twitter

Turuvekere: ತುರುವೇಕೆರೆಯಲ್ಲಿ (Turuvekere) ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ (Fake Factory) ತಿರುಚಿ ಮೈ ಪರಚಿಕೊಳ್ಳುತ್ತಿದೆ. “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ? ಎಂದು ಕಾಂಗ್ರೆಸ್ (Congress) ನಾಯಕರ ಟೀಕೆಗೆ ಜೆಡಿಎಸ್ ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್ (JDS), ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ಕಾಂಗ್ರೆಸ್ ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರಿದೆ. 2018-19ರಲ್ಲಿ ಕಾಂಗ್ರೆಸ್ ಪಕ್ಷದ ವಿರೋಧ ಲೆಕ್ಕಿಸದೆ ರೈತರ ₹25,000 ಕೋಟಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ.

ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ; ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸ್ಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ? ಎಂದು ಪ್ರಶ್ನಿಸಿದೆ. ಇನ್ನೊಂದು ಟ್ವೀಟ್ನಲ್ಲಿ, ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್ (Lottery King) ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ಕಾಂಗ್ರೆಸ್ ಸರಕಾರ.

ಅಷ್ಟೇ ಏಕೆ? ಒಂದು ಕೈಯ್ಯಲ್ಲಿ ₹2000 ಕೊಟ್ಟು ಇನ್ನೊಂದು ಕೈಯ್ಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಢೋಂಗಿ ಗ್ಯಾರಂಟಿ ಕಾಂಗ್ರೆಸ್ ಸರಕಾರ! ಇಲ್ಲಾ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ? ಸ್ವಚ್ಛ ಮನಸ್ಸಿನ ಹಳ್ಳಿಗಳಲ್ಲಿ ಸುಪ್ರಭಾತದ ವೇಳೆಗೆ ದೇವಾಲಯದ ಘಂಟೆನಾದ ಮೊಳಗುತ್ತಿತ್ತು. ಉಷೋದಯಕ್ಕೆ ಮೊದಲೇ ಹಳ್ಳಿಗೆ ಹಳ್ಳಿಯೇ ಮಂಗಳಕರವಾಗಿ ಕಂಗೊಳಿಸುತ್ತಿತ್ತು. ತಾಯಂದಿರು ಮನೆಗಳ ಮುಂದೆ ರಂಗೋಲಿ ಬಿಡಿಸುತ್ತಿದ್ದರೆ, ಪುರುಷರು ಹೊಲ-ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಗ್ಯಾರಂಟಿಗಳು (Guarantee) ಬಂದ ಮೇಲೆ ಏನಾಗಿದೆ? ತಾಯಂದಿರು ರಂಗೋಲಿ ಬಿಡಿಸುವ ಮುನ್ನವೇ ಕಿರಾಣಿ ಅಂಗಡಿಗಳಲ್ಲಿ, ಹಾದಿಬೀದಿಗಳ ಬಾರ್ ಗಳಲ್ಲಿ ಮದ್ಯದ ಘಾಟು ಹೊಡೆಯುತ್ತಿದೆ.

ತಾಯಂದಿರ ಸಬಲೀಕರಣ, ಆರ್ಥಿಕ ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಸೂರ್ಯೋದಕ್ಕೆ ಮೊದಲೇ ಮದ್ಯ ಮಾರಾಟ ಮಾಡುವುದೇ? ಕಾಂಗ್ರೆಸ್ ದಾರಿದ್ರ್ಯ ಎಲ್ಲಿಗೆ ಬಂದು ನಿಂತಿದೆ ನೋಡಿ.. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯಪಾನಕ್ಕೆ ಭಾರೀ ಪ್ರೋತ್ಸಾಹ ಕೊಡುವುದು ‘ಕಾಂಗ್ರೆಸ್ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ಆಗಿದೆ. ಶ್ರೀಗಂಧ, ಸುಗಂಧದ ನಾಡಾಗಿರುವ ಕರ್ನಾಟಕವನ್ನು (Karnataka) ಮದ್ಯದ ಬೀಡನ್ನಾಗಿಸುತ್ತಿದೆ. ಇದನ್ನು ಪ್ರಶ್ನಿಸಿದರೆ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಹಾಗೆಯೇ? ಎಂದು ಪ್ರಶ್ನಿಸಿದೆ.

ಕುಮಾರಸ್ವಾಮಿ (Kumaraswamy) ಅವರು ಹೇಳಿದ್ದು.. ಗ್ಯಾರಂಟಿಗಳಿಂದ ತಾಯಂದಿರನ್ನು ದಿಕ್ಕು ತಪ್ಪಿಸುತ್ತಿದೆ ಎಂದು. ಉಚಿತ ಆರೋಗ್ಯ, ಉಚಿತ ಶಿಕ್ಷಣ ನೀಡುವ ಬದಲು ಅಗ್ಗದ ರಾಜಕೀಯ ಲಾಭ ಮಾಡಿಕೊಳ್ಳುತ್ತಿದೆ ಎಂದು. ಕಾಂಗ್ರೆಸ್ ತನ್ನ ಪಾಪಗಳನ್ನು ಮುಚ್ಚಿಟ್ಟುಕೊಳ್ಳಲು ಸತ್ಯಕ್ಕೆ ಸುಳ್ಳಿನ ಮುಖವಾಡ ಹಾಕುತ್ತಿದೆ. ನಿಜಕ್ಕಾದರೆ, ದಾರಿ ತಪ್ಪುತ್ತಿರುವುದು ರಾಜ್ಯದ ಆರ್ಥಿಕತೆ, ಕರ್ನಾಟಕದ ಹೆಗ್ಗಳಿಕೆ, ಕರ್ನಾಟಕ ಪ್ರತಿಷ್ಠೆ. ಹೆಚ್ಚುತ್ತಿರುವುದು ತಾಯಂದಿರ ಮೇಲಿನ ಸಾಲ. ಈ ವರ್ಷ ₹1 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡುವ ಗುರಿ ಇಟ್ಟುಕೊಂಡಿದೆ ಈ ಸರಕಾರ. ಆ ಸಾಲ ತೀರಿಸೋರು ಯಾರು? ಕಾಂಗ್ರೆಸ್ ತನ್ನ ಖಜಾನೆಯಿಂದ ತೀರಿಸುತ್ತದೆಯೇ ಎಂದು ಟೀಕಿಸಿದೆ.

Tags: CongressguaranteeHDKJDSTuruvekere

Related News

ಹೃದಯಾಘಾತಕ್ಕೆ ಹಾಟ್‌ಸ್ಪಾಟ್‌ ಆದ ಹಾಸನ, ನಿನ್ನೆಯಿಂದ ರಾಜ್ಯದಲ್ಲಿ 6 ಜನರಿಗೆ ಹೃದಯಸ್ತಂಭನ
ಆರೋಗ್ಯ

ಹೃದಯಾಘಾತಕ್ಕೆ ಹಾಟ್‌ಸ್ಪಾಟ್‌ ಆದ ಹಾಸನ, ನಿನ್ನೆಯಿಂದ ರಾಜ್ಯದಲ್ಲಿ 6 ಜನರಿಗೆ ಹೃದಯಸ್ತಂಭನ

July 3, 2025
ಚಿನ್ನಸ್ವಾಮಿ ಕ್ರೀಡಾಂಗಣ ಪ್ರಕರಣ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಆರ್​​ಸಿಬಿಗೆ ನೋಟಿಸ್
Sports

ಚಿನ್ನಸ್ವಾಮಿ ಕ್ರೀಡಾಂಗಣ ಪ್ರಕರಣ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಆರ್​​ಸಿಬಿಗೆ ನೋಟಿಸ್

July 3, 2025
ಕಲಬುರಗಿ ವಸತಿ ಯೋಜನೆಯಲ್ಲಿ ಕಳ್ಳಾಟ : ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ ಮಾಡಿದ ಅಧಿಕಾರಿಗಳು
ಮಾಹಿತಿ

ಕಲಬುರಗಿ ವಸತಿ ಯೋಜನೆಯಲ್ಲಿ ಕಳ್ಳಾಟ : ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ ಮಾಡಿದ ಅಧಿಕಾರಿಗಳು

July 3, 2025
ಶಾಲಿನಿ ರಜನೀಶ್ ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ: ರವಿಕುಮಾರ್ ವಿರುದ್ದ ದೂರು
ರಾಜಕೀಯ

ಶಾಲಿನಿ ರಜನೀಶ್ ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ: ರವಿಕುಮಾರ್ ವಿರುದ್ದ ದೂರು

July 3, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.