Visit Channel

ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ದಳಪತಿಗಳು!

jds

ಜಾತ್ಯಾತೀತ ಜನತಾದಳದ(JDS) ಕಾರ್ಯಕರ್ತರ ಶ್ರಮದಿಂದ ಶಾಸಕರಾಗಿ ಆಯ್ಕೆಯಾಗಿ ಹಣದ ಆಸೆಗಾಗಿ ಪಕ್ಷಕ್ಕೆ ದ್ರೋಹ ಮಾಡಿದವರ ವಿರುದ್ದ ಕಾನೂನು(Law) ಹೋರಾಟ ನಡೆಸಲು ಜೆಡಿಎಸ್ ನಾಯಕರು(JDS Leaders) ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

HD Devegowda


ಬೆಂಗಳೂರಿನ(Bengaluru) ಜೆಪಿ ಭವನದಲ್ಲಿ(JP Bhavan) ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆದಿದ್ದು, ರಾಜ್ಯಸಭಾ ಚುನಾವಣೆಯಲ್ಲಿ(Rajyasabha Election) ಪಕ್ಷಕ್ಕೆ ದ್ರೋಹ ಮಾಡಿ, ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ್‍ಗೌಡ ಮತ್ತು ಗುಬ್ಬಿ ಶಾಸಕ ಎಸ್.ಆರ್.ಶ್ರೀವಾಸ್ ಅವರಿಬ್ಬರ ಶಾಸಕ ಸ್ಥಾನವನ್ನು ಅನರ್ಹಗೊಳಿಸಲು ಕಾನೂನು ಹೋರಾಟ ನಡೆಸಲು ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರ(HD Devegowda) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈಗಾಗಲೇ ಶ್ರೀನಿವಾಸ್‍ಗೌಡ ಮತ್ತು ಎಸ್.ಆರ್. ಶ್ರೀನಿವಾಸ್ ಇಬ್ಬರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ ಈ ಇಬ್ಬರೂ ಶಾಸಕರ ನಡೆಯ ವಿರುದ್ದ ದೇವೇಗೌಡರು ಪುಲ್ ಗರಂ ಆಗಿದ್ದು, ಕಾನೂನಿನ ಮೂಲಕವೇ ಇಬ್ಬರಿಗೂ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಶೆಡ್ಯೂಲ್ 11 ಅಡಿಯಲ್ಲಿ ‘ಆಂಟಿ ಡಿಫೆಕ್ಷನ್’ ಕೇಸ್ ಹಾಕಲು ನಿರ್ಧರಿಸಿದ್ದು, ಈ ಸಂಬಂಧ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshara Hegde Kageri) ಅವರನ್ನು ಭೇಟಿ ಮಾಡಿ ದೂರು ನೀಡಲು ದಳಪತಿಗಳು ಸಿದ್ದತೆ ನಡೆಸಿದ್ದಾರೆ.

jds

ಪಕ್ಷಕ್ಕೆ ದ್ರೋಹ ಮಾಡಿದವರ ಶಾಸಕ(MLA) ಸ್ಥಾನವನ್ನು ಅನರ್ಹವಾಗುವಂತೆ ಮಾಡಿ, ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಮಾಡುವುದೇ ದಳಪತಿಗಳ ತಂತ್ರವಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ನಾಯಕರು ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.