Hassan : ಮಹತ್ವದ ಬೆಳವಣಿಗೆಯಲ್ಲಿ ಹಾಸನ(Hassan) ಜಿಲ್ಲೆಯ ಅನೇಕ ಜೆಡಿಎಸ್ ಕಾರ್ಯಕರ್ತರು ದಳಪತಿಗಳಿಗೆ ಶಾಕ್‌ನೀಡಿ, ಕಾಂಗ್ರೆಸ್(Congress) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ (JDS workers joined Congress) ಹಾಸನ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ.

ಅಚ್ಚರಿ ಎಂದರೆ ಮಾಜಿ ಸಚಿವ ಎಚ್.ಡಿ.ರೇವಣ್ಣನವರ(HD Revanna) ಹೊಳೆನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್(JDS) ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು, ಮಾಜಿ ಸದಸ್ಯ ಗಂಗಾಧರ್ ಸೇರಿದಂತೆ ಅನೇಕರು ಕಾಂಗ್ರೆಸ್ ಪಕ್ಷದ ಹಾಸನ ಜಿಲ್ಲಾ ಉಸ್ತುವಾರಿ ಡಿ.ಕೆ.ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ಧಾರೆ.
ಪುರಸಭೆಯ ಘಟಾನುಘಟಿ ನಾಯಕರೇ ಪಕ್ಷ ತೊರೆಯುತ್ತಿರುವುದು ರೇವಣ್ಣನವರ ನಿದ್ದೆಗೆಡಿಸಿದೆ.
ಇದನ್ನೂ ಓದಿ: ಮೈಸೂರು – ಬನ್ನೇರುಘಟ್ಟ ರಿಂಗ್ ರಸ್ತೆಗೆ ಪುನೀತ್ ರಾಜ್‌ಕುಮಾರ್ ನಾಮಕರಣ
ಸಂಪೂರ್ಣ ಹಿಡಿತವಿರುವ ಹೊಳೆನರಸೀಪುರ(Holenarasipura) ಕ್ಷೇತ್ರದಲ್ಲೇ ರೇವಣ್ಣ ಅವರಿಗೆ ಹಿನ್ನಡೆ ಉಂಟಾಗುತ್ತಿದೆ. ಹೀಗಾಗಿ ಪ್ರತಿ ದಾಳ ರೂಪಿಸಲು ರೇವಣ್ಣ ಕೂಡಾ ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ಹಾಸನ ಜಿಲ್ಲೆಯ ಮೇಲೆ ಹಿಡಿತ ಹೊಂದಿರುವ ರೇವಣ್ಣ ಅವರನ್ನು ಹೊಳೆನರಸೀಪುರ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸುವ ಮೂಲಕ ಇತರೆ ಜಿಲ್ಲೆಗಳಲ್ಲಿ ಅವರ ಹೆಚ್ಚು ಪ್ರಚಾರ ನಡೆಸದಂತೆ ಮಾಡಲು,
ಕಾಂಗ್ರೆಸ್ ಈ ತಂತ್ರ ಹೆಣೆದಿದ್ದು, ಈ ಬಾರಿಯ ಚುನಾವಣೆಯಲ್ಲಿ ಹೊಳೆನರಸೀಪುರದಲ್ಲೇ ರೇವಣ್ಣನವರಿಗೆ ಪೈಪೋಟಿ ನೀಡಲು ಕೈಪಡೆ ಮುಂದಾಗಿದೆ.

ಇನ್ನು ಹಾಸನ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಸಂಸದ ಡಿ.ಕೆ.ಸುರೇಶ್(DK Suresh) ಜಿಲ್ಲಾಯಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣೆಗೆ ಬೇಕಾದ ತಯಾರಿಯನ್ನು ಭರದಿಂದ ಪ್ರಾರಂಭಿಸಿದ್ದಾರೆ.
ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಅರಸೀಕೆರೆಯ ಶಾಸಕ ಶಿವಲಿಂಗೇಗೌಡ ಮತ್ತು ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್ (JDS workers joined Congress) ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.
ಹೀಗಾಗಿ ಈ ಬಾರಿ ಹಾಸನದಲ್ಲಿ ಕಾಂಗ್ರೆಸ್2-3 ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದೆ.
ಹಾಸನ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಿಂದ ಗೊಂದಲಕ್ಕೀಡಾಗಿರುವ ಜೆಡಿಎಸ್ ಕಾರ್ಯಕರ್ತರು ಪಕ್ಷ ತೊರೆಯಲು ಮುಂದಾಗಿದ್ದಾರೆ.
ಹಾಸನ ಜಿಲ್ಲೆಯ ಜೆಡಿಎಸ್‍ನಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಲೇ ಇದೆ.

ಇನ್ನು ಶಿವಲಿಂಗೇಗೌಡರನ್ನು ಜೆಡಿಎಸ್‌ನಲ್ಲೇ ಉಳಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸಿರುವ ರೇವಣ್ಣ, ಫೆ.12 ರವರೆಗೆ ಶಿವಲಿಂಗೇಗೌಡರಿಗೆ ತಮ್ಮ ನಿರ್ಧಾರ ತಿಳಿಸಲು ಗಡುವು ನೀಡಿದ್ದಾರೆ.
ಇನ್ನು ಫೆ. 9ರಂದು ಅರಸೀಕೆರೆಯಲ್ಲಿ ಜೆಡಿಎಸ್‌ಪಕ್ಷದ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮವಿದ್ದು, ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ,
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಶಿವಲಿಂಗೇಗೌಡರ ಬಗ್ಗೆಯೂ ಚರ್ಚೆಯಾಗಲಿದೆ.