ಠೇವಣಿ ಕಳೆದುಕೊಂಡ ಜೆಡಿಎಸ್

ಬೆಂಗಳೂರು/ರಾಮನಗರ, ನ 2: “ಜೆಡಿಎಸ್‌ ಪಕ್ಷವು ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌ ಪಕ್ಷದ ನಾಯಕರು ನಡೆಸಿದ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ” ಎಂದು ದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷವು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಫರ್ಧೆ ಮಾಡಿತ್ತು ಎಂದು ಹೇಳಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಸಿಂಧಗಿ ಮತ್ತು ಹಾನಗಲ್‌ ಕ್ಷೇತ್ರಗಳಲ್ಲಿ ಸಿಕ್ಕಿರುವ ಮತಗಳೇ ಉತ್ತರ ನೀಡಿವೆ. ಸ್ಥಳೀಯ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ನಿಲ್ಲಿಸಲಾಯಿತು” ಎಂದು ಹೇಳಿದರು.

ಸಿಂದಗಿ ಮತ್ತು ಹಾನಗಲ್‌ 2 ಕಡೆಗಳಲ್ಲೂ  ಜೆಡಿಎಸ್‌ ಠೇವಣಿ ಕಳೆದುಕೊಂಡಿದೆ.

Exit mobile version