Visit Channel

‘ಜೀವ್ನಾನೇ ನಾಟ್ಕ ಸಾಮಿ’ ಅಂತಾರೆ ಕಿರಣ್ ರಾಜ್.

WhatsApp Image 2021-07-31 at 17.39.33

ಮಹಾಭಾರತದ ಉಪಕಥೆಯನ್ನ ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ‘ಜೀವ್ನಾನೇ ನಾಟ್ಕ ಸಾಮಿ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ‘ಕನ್ನಡತಿ’ ಧಾರಾವಾಹಿ ಖ್ಯಾತಿಯ‌ ಕಿರಣ್ ರಾಜ್ ಹಾಗೂ ‘ಸರಿಗಮಪ’ ಮೂಲಕ ಮನೆಮಾತಾಗಿದ್ದ ಶ್ರೀಹರ್ಷ ಅಭಿನಯಿಸಿದ್ದಾರೆ.
.
ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರದ ನಿರ್ದೇಶಕರು. ಮಾಧ್ಯಮಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಚಿತ್ರತಂಡ ಮಹಾಭಾರತದ ಉಪಕಥೆಯನ್ನು ಆಧರಿಸಿ ಹಾಗೂ ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಷಯಗಳ ಬಗ್ಗೆ ಕಥಾವಸ್ತುವನಿಟ್ಟುಕೊಂಡು ಈ ಚಿತ್ರ‌ ನಿರ್ಮಾಣ ಮಾಡಿದ್ದಾಗಿ ತಿಳಿಸಿತು.

ಪಾಸಿಟಿವ್ ಹಾಗೂ ನೆಗಟಿವ್ ಆಲೋಚನೆಗಳನ್ನು ಎರಡು ಪಾತ್ರಗಳ ಮೂಲಕ ಹೇಳಹೊರಟಿದ್ದೇವೆ. ಕಿರಣ್ ರಾಜ್ ಹಾಗೂ ಶ್ರೀಹರ್ಷ ಈ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುತ್ತಾರೆ ನಿರ್ದೇಶಕರು.
ಇದೊಂದು ಸಂಪೂರ್ಣ ಮನರಂಜನಾ ಚಿತ್ರ. ಸ್ವಲ್ಪ ಟ್ರಾಜಿಡಿ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ. ಇದೇ ಆಗಸ್ಟ್ ‌19 ಸಿನಿರಸಿಕರ ಮಡಿಲಿಗೆ ನಮ್ಮ ಚಿತ್ರ ಹಾಕುತ್ತಿದ್ದೇವೆ. ನೋಡಿ ಹರಸಿ ಎಂದು ನಿರ್ದೇಶಕ ರಾಜು ಭಂಡಾರಿ ವಿನಂತಿಸಿದರು.‌
‘ಕನ್ನಡತಿ’ ಧಾರಾವಾಹಿ‌ ಖ್ಯಾತಿಯ ಕಿರಣ್ ರಾಜ್ ಸಹ ತಮ್ಮ ‌ಪಾತ್ರ ವಿವರಣೆ ನೀಡುತ್ತಾ, ಇಂತಹ ಒಳ್ಳಯ ತಂಡದಲ್ಲಿ ಅಭಿನಯಿಸಿದ್ದ ಸಂತೋಷ ನನಗಿದೆ. ನನ್ನ ಧಾರಾವಾಹಿಯ ಅಭಿಮಾನಿಗಳು ಈ ಚಿತ್ರವನ್ನು ನೋಡಿ ಗೆಲಿಸುತ್ತಾರೆ ಎನ್ನುತ್ತಾರೆ ಕಿರಣ್ ರಾಜ್.

“ಸರಿಗಮಪ” ದಲ್ಲಿ ತಮ್ಮ ಗಾಯನದ ಮೂಲಕ ಮನೆಮಾತಾಗಿದ್ದ, ಶ್ರೀಹರ್ಷ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಈ ಚಿತ್ರದಲ್ಲಿ ಬರೀ ನಟನೆಯಷ್ಟೇ ಅಲ್ಲ. ಒಂದು ಹಾಡನ್ನು ಹಾಡಿದ್ದೇನೆ ಅಂತಾರೆ ಶ್ರೀಹರ್ಷ. ತೆಲುಗು – ತಮಿಳು ಸಿನಿಮಾಗಳಲ್ಲಿ ನಟಿಸಿ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅಭಿನಯಿಸುತ್ತಿರುವ ಪವಿತ್ರ ಕೋಟ್ಯಾನ್ ಹಾಗೂ ಅನಿಕ ರಮ್ಯ ಈ ಚಿತ್ರದ ನಾಯಕಿಯರು.‌ ಇವರು ಸಹ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳಾಡಿದರು.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಆಗಸ್ಟ್ 19 ಚಿತ್ರ ಬಿಡುಗಡೆ ಮಾಡುತ್ತಿದ್ದೇವೆ.‌ ಪ್ರೇಕ್ಷಕರು ನಮ್ಮ ಸಿನಿಮಾಗೆ ಗೆಲುವಿನ ಮಾಲೆ ತೊಡಿಸುತ್ತಾರೆ ಎಂಬ ಅನಿಸಿಕೆ
ನಿರ್ಮಾಪಕ ರಾಜಶೇಖರ್ ಶಿರಹಟ್ಟಿ ಅವರದು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.