Job News : ಕರ್ನಾಟಕ(Karnataka) ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000 ರ ಪ್ರಕರಣ 14(2) ರನ್ವಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ(Rani Channamma University) (ಬೆಳಗಾವಿ) ದ ಕುಲಪತಿಯ ಹುದ್ದೆಗೆ ಮತ್ತು ಮಂಗಳೂರು ವಿಶ್ವವಿದ್ಯಾಲಯದ(Mangalore University) ಕುಲಪತಿ(Chancellor) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಅಧಿಸೂಚನೆಗಳನ್ನು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಹೊರಡಿಸಿ, ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 20 ದಿನಗಳ ಒಳಗಾಗಿ ಸಲ್ಲಿಸತಕ್ಕದ್ದು.ಉನ್ನತ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್(Website) ಮೂಲಕ ಅರ್ಜಿ ನಮೂನೆ ಮತ್ತು ಈ ಸಂಬಂಧ ಹೆಚ್ಚಿನ ವಿವರಗಳನ್ನು ಪಡೆಯಬಹುದು. ಉನ್ನತ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ https://hed.karnataka.gov.in ಗೆ ಭೇಟಿ ನೀಡಿ ಪಡೆಯಬಹುದು.
ಇದನ್ನೂ ಓದಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 53 ಹುದ್ದೆಗಳಿಗೆ ನೇರ ನೇಮಕಾತಿ: ಅರ್ಜಿ ಆಹ್ವಾನ… ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸಲು ಅರ್ಹತೆಗಳು
10 ವರ್ಷ ಅಥವಾ ಅದಕ್ಕೂ ಮೇಲ್ಪಟ್ಟ ಅವಧಿಗೆ ಪ್ರಾಧ್ಯಾಪಕ ಅಥವಾ ತತ್ಸಮಾನ ವೃಂದದಲ್ಲಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ವಿವಿ ವೆಬ್‌ಸೈಟ್‌ನಲ್ಲಿ ನೀಡಲಾದ 4 ಪುಟದ ನಮೂನೆಯಲ್ಲಿ ತಮ್ಮ ಸಂಪೂರ್ಣ ಸೇವಾ ವಿವರಗಳುಳ್ಳ ಅರ್ಜಿಗಳನ್ನು,ವಿವಿಗಳ ವಿಳಾಸಕ್ಕೆ ಅಗತ್ಯವಾದ ಹೆಚ್ಚಿನ ವಿವರ /ದಾಖಲೆಗಳ 5 ಪ್ರತಿಗಳನ್ನು ಕಳುಹಿಸಬಹುದು. ಅಥವಾ ಉನ್ನತ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ನೀಡಲಾದ ವಿಳಾಸಕ್ಕೆ ಕಳುಹಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
10 ವರ್ಷ ಪ್ರಾಧ್ಯಾಪಕ ಹುದ್ದೆ / ತತ್ಸಮಾನ ವೃಂದದ ಹುದ್ದೆ ನಿರ್ವಹಿಸಿದ ದಾಖಲೆ
ಆಧಾರ್ ಕಾರ್ಡ್
ಶೈಕ್ಷಣಿಕ ಅರ್ಹತೆಗಳ ದಾಖಲೆಗಳು
ಅರ್ಜಿದಾರರ ವಿರುದ್ಧ ಇಲಾಖಾ ವಿಚಾರಣೆ / ನ್ಯಾಯಾಂಗ ವಿಚಾರಣೆ / ಶಿಸ್ತು ಕ್ರಮ /ಕ್ರಿಮಿನಲ್ ಪ್ರಕರಣ ಬಾಕಿ ಇರುವ / ಇಲ್ಲದಿರುವ ಬಗ್ಗೆ ದೃಢೀಕರಣದೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಇದನ್ನೂ ಓದಿ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಕುಲಪತಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದವರ ಸಾಧನೆ, ಕಾರ್ಯಾನುಭವ, ಹಿರಿತನ,ದಾಖಲೆಗಳ ಪರಿಶೀಲನೆ, ಶೈಕ್ಷಣಿಕ ಅರ್ಹತೆ, ಎಲ್ಲವನ್ನು ಪರಿಗಣಿಸಿ, ನಂತರ ಸಂದರ್ಶನ ನಡೆಸಿ ನೇಮಕ ಮಾಡಲಾಗುತ್ತದೆ.
ರಶ್ಮಿತಾ ಅನೀಶ್