ಬೆಸ್ಕಾಂನಲ್ಲಿ ಡಿಪ್ಲೊಮ, ಬಿಇ ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

Bengaluru: ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (Bangalore Electricity Supply Corporation Pvt)ದಲ್ಲಿ ಡಿಪ್ಲೊಮ (Job Vacancy in BESCOM 2023) ಮತ್ತು

ಬಿಇ (Diploma And BE) ಪಾಸಾಗಿರುವವರಿಗೆ ಭರ್ಜರಿ ಉದ್ಯೋಗಾವಕಾಶ ಲಭ್ಯವಿದೆ. 400 ಅಪ್ರೆಂಟಿಸ್ ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಆಸಕ್ತಿ ಇರುವ ಇಂಜಿನಿಯರಿಂಗ್ (Engineer) ಪದವೀಧರರು ಹಾಗೂ ಡಿಪ್ಲೊಮ ಪಾಸಾದವರು ಅರ್ಜಿ ಸಲ್ಲಿಸಬಹುದು. 1 ವರ್ಷದ ಅವಧಿಗೆ ಈ ಹುದ್ದೆಗಳನ್ನು ನಿಯೋಜನೆ ಮಾಡಿಕೊಳ್ಳಲಿದ್ದು, ಮಾಸಿಕ

ಸ್ಟೈಫಂಡ್ ಅನ್ನು ನೀಡಲಾಗುತ್ತದೆ. ಈ ಕುರಿತು ಸಂಪೂರ್ಣ (Job Vacancy in BESCOM 2023) ವಿವರ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ : ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ
ಹುದ್ದೆಗಳ ಹೆಸರು : ಟೆಕ್ನೀಷಿಯನ್ ಅಪ್ರೆಂಟಿಸ್ (Technician Apprentice)
ಒಟ್ಟು ಹುದ್ದೆಗಳ ಸಂಖ್ಯೆ : 400

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ :
ಇನ್ಫಾರ್ಮೇಷನ್ ಸೈನ್ಸ್ ಮತ್ತು ಇಂಜಿನಿಯರಿಂಗ್ : 20
ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ :143
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ : 36
ಸಿವಿಲ್ ಇಂಜಿನಿಯರಿಂಗ್ (Civil Engineer) : 05
ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್ : 05
ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯೂನಿಕೇಷನ್ ಇಂಜಿನಿಯರಿಂಗ್ : 116
ಒಟ್ಟು ಹುದ್ದೆಗಳ ಸಂಖ್ಯೆ : 325

ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (CSE) : 10
ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯುನಿಕೇಷನ್ ಇಂಜಿನಿಯರಿಂಗ್: 10
ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 55
ಒಟ್ಟು ಹುದ್ದೆಗಳ ಸಂಖ್ಯೆ : 75

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 11-12-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 31-12-2023

ಶೈಕ್ಷಣಿಕ ವಿದ್ಯಾರ್ಹತೆ :
ಗ್ರಾಜುಯೇಟ್ ಅಪ್ರೆಂಟಿಸ್ : ಬಿಇ ಪದವಿ
ಟೆಕ್ನೀಷಿಯನ್ ಅಪ್ರೆಂಟಿಸ್ : ಡಿಪ್ಲೊಮ ಇನ್ ಇಂಜಿನಿಯರಿಂಗ್ (Diploma In Engineer)

ಸ್ಟೈಫಂಡ್ :
ಗ್ರಾಜುಯೇಟ್ ಅಪ್ರೆಂಟಿಸ್ : ರೂ.9008.
ಟೆಕ್ನೀಷಿಯನ್ ಅಪ್ರೆಂಟಿಸ್ : ರೂ.8000.

ಹುದ್ದೆಯ ಅವಧಿ : 1 ವರ್ಷ.

ಮೂಲ ದಾಖಲೆಗಳ ಪರಿಶೀಲನೆ ವಿಳಾಸ : BESCOM, HRD Centre, 1st Floor, Crescent Tower, Crescent Road, Near Mallige Nursing Home, Race Course, Bangalore 560001.

ಆಯ್ಕೆ ವಿಧಾನ : ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧಿಕೃತ ವೆಬ್ಸೈಟ್ ವಿಳಾಸ : https://bescom.org
ಬೆಸ್ಕಾಂ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ವಿಳಾಸ : https://nats.education.gov.in/

ಇದನ್ನು ಓದಿ: ಬೆಂಕಿ ಅವಘಡ: ರಸ್ತೆ ಮಧ್ಯೆ ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಬಚಾವ್

Exit mobile version