2500 BMTC ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ (Job Vacancy in BMTC) ಅಧಿಕೃತ ಅಧಿಸೂಚನೆ ಹೊರಡಿಲಾಗಿದೆ. ಈ ಬಗ್ಗೆ ಕರ್ನಾಟಕ

ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಬಿಡುಗಡೆ (Job Vacancy in BMTC) ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ ಸಂಸ್ಥೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು : ನಿರ್ವಾಹಕ
ಹುದ್ದೆಗಳ ಸಂಖ್ಯೆ : 2500.

ಶೈಕ್ಷಣಿಕ ವಿದ್ಯಾರ್ಹತೆ :
PUC ಪಾಸ್ ಅಥವಾ ICSE / 3 ವರ್ಷಗಳ ಡಿಪ್ಲೊಮ ಪಾಸ್.

ಇತರೆ ಅರ್ಹತೆ
ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಹೊಂದಿರಬೇಕು. ಪುರುಷರ ಎತ್ತರ 160 CM, ಮಹಿಳೆಯರ ಎತ್ತರ 150 CM ಎತ್ತರ ಇರಬೇಕು.

ವಯೋಮಿತಿ :
ಕನಿಷ್ಠ 18 ವರ್ಷ ಆಗಿರಬೇಕು. GM – 35 ವರ್ಷಗಳು
2A / 2B / 3A / 3B ಅಭ್ಯರ್ಥಿಗಳಿಗೆ 38 ವರ್ಷಗಳು.
ST / SC/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.
ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷಗಳು ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ : ರೂ.18660-25300.

ತರಬೇತಿ ಅವಧಿ ಭತ್ಯೆ ಮತ್ತು ವೇತನ ಶ್ರೇಣಿ : ಒಂದು ವರ್ಷ ಕಾಲ ವೃತ್ತಿ ತರಬೇತಿಗಾಗಿ ನಿಯೋಜಿಸಲಾಗುವುದು. ಈ ವೇಳೆ ತರಬೇತಿ ಭತ್ಯೆಯಾಗಿ ರೂ.9,100 ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಲಿಂಕ್ ಅನ್ನು ಆಯ್ಕೆ ಮಾಡಿ, ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : GM ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ರೂ.750 ಹಾಗೂ SC/ST ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ: 10-03-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 10-04-2024
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 13-04-2024

ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ಗೆ ಭೇಟಿ ನೀಡಿ : https://cetonline.karnataka.gov.in/keawebentry456/kbknrk2023/BMTC_SD_final_Detailed_Notification1kannada.pdf

ಇದನ್ನು ಓದಿ :ಕರ್ಕಶವಾದ ಲೌಡ್ ಸ್ಪೀಕರ್ ಅವನು, ದೇಶವನ್ನು ಮಂಗ ಮಾಡ್ತಾನೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್

Exit mobile version