ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ (Bengaluru) ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ #RajivGandhiUniversityof HealthSciences ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳ ವಿವರ :
ಸಹಾಯಕ ಗ್ರಂಥಪಾಲಕ (ಗ್ರೂಪ್ ಸಿ) : 01
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್ ಬಿ) : 05
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್ ಬಿ) : 01
ಸಹಾಯಕ (ಗ್ರೂಪ್ ಸಿ) : 12
ಕಿರಿಯ ಸಹಾಯಕ (ಗ್ರೂಪ್ ಸಿ) : 25

ಹುದ್ದೆವಾರು ವೇತನ :
ಸಹಾಯಕ (ಗ್ರೂಪ್ ಸಿ) : Rs.37,900-70850.
ಕಿರಿಯ ಸಹಾಯಕ (ಗ್ರೂಪ್ ಸಿ) : Rs.21400-42000.
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್ ಬಿ) : Rs.43100-83900.
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್ ಬಿ) : Rs.43100-83900.
ಸಹಾಯಕ ಗ್ರಂಥಪಾಲಕ (ಗ್ರೂಪ್ ಸಿ) : Rs.30,350-58250.

ಹುದ್ದೆವಾರು ಶೈಕ್ಷಣಿಕ ಅರ್ಹತೆ :
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್ ಬಿ) : MCA ಅಥವಾ ಇಲೆಕ್ಟ್ರಾನಿಕ್ಸ್ /ಕಂಪ್ಯೂಟರ್ ಇಂಜಿನಿಯರಿಂಗ್ ಪದವಿ
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್ ಬಿ) : ಸಿವಿಲ್ ಇಂಜಿನಿಯರಿಂಗ್ ಪದವಿ
ಸಹಾಯಕ ಗ್ರಂಥಪಾಲಕ (ಗ್ರೂಪ್ ಸಿ) : ಲೈಬ್ರರಿ ಸೈನ್ಸ್ ಸ್ನಾತಕೋತ್ತರ ಪದವಿ
ಸಹಾಯಕ (ಗ್ರೂಪ್ ಸಿ) : ಯಾವುದೇ ಪದವಿ
ಕಿರಿಯ ಸಹಾಯಕ (ಗ್ರೂಪ್ ಸಿ) : ದ್ವಿತೀಯ PUC

ವಯೋಮಿತಿ :
ಕನಿಷ್ಠ 18 ವರ್ಷ ವಯಸ್ಸು ಪೂರೈಸಿರಬೇಕು
GM ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
OBC ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
SC, ST ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ನೇಮಕಾತಿ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ಮೂಲಕ.

ಅರ್ಜಿ ಶುಲ್ಕ :
GM ಅಭ್ಯರ್ಥಿಗಳಿಗೆ ರೂ.750.
OBC ವರ್ಗದ ಅಭ್ಯರ್ಥಿಗಳಿಗೆ ರೂ.750.
ST, SC ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ರೂ.500.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ : 26-03-2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 25-04-2024
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : 26-04-2024

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ : https://cetonline.karnataka.gov.in/kea/
ಹೆಚ್ಚಿನ ಮಾಹಿತಿಗಾಗಿ : http://www.rguhs.ac.in/index.html

Exit mobile version