download app

FOLLOW US ON >

Wednesday, June 29, 2022
Breaking News
ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ : ಬಿಜೆಪಿನೇಪಾಳದಲ್ಲಿ ಪಾನಿಪುರಿ ನಿಷೇಧ ; ಯಾಕೆ ಎಂಬುದಕ್ಕೆ ಇಲ್ಲಿದೆ ಉತ್ತರಗವಿಮಠಕ್ಕೆ ಹರಿದು ಬರುತ್ತಿದೆ ದೇಣಿಗೆ, ಸರ್ಕಾರದಿಂದಲೂ 10 ಕೋಟಿ ಘೋಷಣೆGST ಹೊಸ ದರಗಳ ವಿವರಣೆ ; ವಸ್ತುಗಳ ಸಂಪೂರ್ಣ ಪಟ್ಟಿ ಇಲ್ಲಿದೆಬಿಜೆಪಿ ಅಂದ್ರೆ ಬಿಸ್ನೆಸ್ ಕ್ಲಾಸಿನ ಕಾಮಧೇನು : ಹೆಚ್.ಡಿಕೆಚಾಮುಂಡೇಶ್ವರಿ ಅಮ್ಮನವರ ಆಷಾಢ ಶುಕ್ರವಾರದ ದರ್ಶನಕ್ಕೆ ಉಚಿತ ಸರ್ಕಾರಿ ಬಸ್ ಸೇವೆಮಂಡ್ಯ ಜನರಿಗಾಗಿ ಮಾತ್ರ ನಾನು ರಾಜಕೀಯಕ್ಕೆ ಬಂದಿದ್ದೇನೆ ; ಸುಮಲತಾಕನ್ಹಯ್ಯಾ ಹತ್ಯೆ ; ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ : ಸಿದ್ದರಾಮಯ್ಯನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ನೀಡಿದ ವ್ಯಕ್ತಿಯ ಶಿರಚ್ಛೇದ‘ಅಗ್ನಿವೀರ’ ಹುದ್ದೆಗೆ ನಿರೀಕ್ಷೆಗೂ ಮೀರಿ ಬಂದ ಅರ್ಜಿಗಳು
English English Kannada Kannada

ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ!

ಪಂಜಾಬ್‍ ನ್ಯಾಷನಲ್‍ ಬ್ಯಾಂಕ್ನಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
bank

ಬೆಂಗಳೂರು: ಪಂಜಾಬ್‍ ನ್ಯಾಷನಲ್‍ ಬ್ಯಾಂಕ್ನಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಬೆಂಗಳೂರಿನ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಪೂರ್ವ, ವೃತ್ತ ಕಚೇರಿಯ ವಿವಿಧ ಶಾಖೆಗಳಿಗೆ ಖಾಲಿ ಇರುವ 21 ಜವಾನ ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಈ ಹುದ್ದೆಗಳಿಗೆ ವೇತನವನ್ನು 11ನೇ ದ್ವಿಪಕ್ಷೀಯ ಒಪ್ಪಂದದಂತೆ ಮತ್ತು ಬ್ಯಾಂಕಿನಿಂದ ಪ್ರಸ್ತಾಪಿಸಲಾಗುವ ತರುವಾಯದ ಒಪ್ಪಂದದಂತೆ ನೀಡಲಾಗುತ್ತದೆ ಎಂದು ತಿಳಿಸಿದೆ.
ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ

:• ಬೆಂಗಳೂರು ನಗರ – 18
• ಕೋಲಾರ – 03

PNB recovered Rs 170 crore from customers on 0 balance, disclosed in RTI -  Business League


ಜವಾನ ಹುದ್ದೆಯ ನೇಮಕಾತಿಗಾಗಿ ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ನಿಗದಿ ಪಡಿಸಲಾಗಿದೆ. ವಯೋಮಿತಿಯಲ್ಲಿ ಜಾತಿವಾರು ಮೀಸಲಾತಿಯ ಸಡಿಲಿಕೆ ಅನ್ವಯವಾಗಲಿದೆ. ವಿದ್ಯಾರ್ಹತೆ,
ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು 12ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಜೊತೆಗೆ ಕನ್ನಡ, ಇಂಗ್ಲಿಷ್ ಭಾಷೆಯನ್ನು ಓದೋದಕ್ಕೆ, ಬರೆಯೋದಕ್ಕೆ ಬರಬೇಕು.

Punjab National Bank Q2 Net Profit to Rs. 1,009.1 cr: Prabhudas Lilladher


ಆಯ್ಕೆಯ ವಿಧಾನ :

ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಪಡೆದಿರುವ ಶೇ.40ರಷ್ಟು ಅಂಕ ಹಾಗೂ 12ನೇ ತರಗತಿಯಲ್ಲಿ ಪಡೆದಿರುವಂತ ಶೇ.60ರ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಅರ್ಜಿಯೊಂದಿಗೆ ಸ್ವವಿವರ, ಸ್ವಯಂ ದೃಢೀಕರಿಸಲಾದ ಇತ್ತೀಚಿನ ಭಾವಚಿತ್ರ, ವಯಸ್ಸಿಗೆ ಪೂರಕವಾದ ದಾಖಲೆಗಳ ನಕಲು, 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳು, ನಿವಾಸ ಪ್ರಮಾಣ ಪತ್ರ, ಖಾಯಂ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್, ಹೆಚ್ ಆರ್ ವಿಭಾಗ, ವೃತ್ತ ಕಚೇರಿ, ಬೆಂಗಳೂರು ಪೂರ್ವ, ರಹೇಜಾ ಟವರ್ಸ್, ಎಂ.ಜಿ ರಸ್ತೆ, ಬೆಂಗಳೂರು-56001 ಇಲ್ಲಿಗೆ ದಿನಾಂಕ 03-03-2022ರ ಒಳಗಾಗಿ ಖುದ್ದಾಗಿ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 080-25095076 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article