ಇಗ್ನೊದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ; 81,100 ಆಕರ್ಷಕ ವೇತನ..!

ದೇಶದ ಪ್ರತಿಷ್ಠಿತ ಮುಕ್ತ ವಿಶ್ವವಿದ್ಯಾನಿಲಯ ಇಂದಿರಾ ಗಾಂಧಿ ನ್ಯಾಷನಲ್ ಓಪನ್ (Jobs in IGNOU) ಯುನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ (Jobs in IGNOU) ಸಲ್ಲಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ
ಜೂನಿಯರ್ ಅಸಿಸ್ಟಂಟ್ ಕಮ್ ಟೈಪಿಸ್ಟ್ : 50
ಸ್ಟೆನೋಗ್ರಾಫರ್ : 52

ಹುದ್ದೆವಾರು ವೇತನ :
ಜೂನಿಯರ್ ಅಸಿಸ್ಟಂಟ್ ಕಮ್ ಟೈಪಿಸ್ಟ್ : 19,900-63200.
ಸ್ಟೆನೋಗ್ರಾಫರ್ : 25500-81100.

ಶೈಕ್ಷಣಿಕ ವಿದ್ಯಾರ್ಹತೆ : ಕನಿಷ್ಠ ದ್ವಿತೀಯ PUC ಜೊತೆಗೆ ಟೈಪಿಂಗ್ ಹಾಗೂ ಸ್ಟೆನೋಗ್ರಫಿ ಕೋರ್ಸ್ ಪಾಸ್ ಆಗಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ಆಗಿರಬೇಕು ಮತ್ತು ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. ಸ್ಟೆನೋಗ್ರಾಫರ್ ಹುದ್ದೆಗೆ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. OBC ಅಭ್ಯರ್ಥಿಗಳಿಗೆ

3 ವರ್ಷ, SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 01-12-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 21-12-2023
ಮಾಹಿತಿ ತಿದ್ದುಪಡಿಗೆ ಅವಕಾಶ ದಿನಾಂಕ : ಡಿಸೆಂಬರ್ 22 ರಿಂದ 25ವರೆಗೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ :
GM / OBC ವರ್ಗದವರಿಗೆ ರೂ.1000.
SC / ST / EWS ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ರೂ.600.

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ವಿಳಾಸ: http://www.ignou.ac.in/

ಇದನ್ನು ಓದಿ: ಡಿಸೆಂಬರ್ 13ರೊಳಗೆ ಭಾರತದ ಸಂಸತ್ತಿನ ಮೇಲೆ ದಾಳಿ ನಡೆಸ್ತೇವೆ : ಖಲಿಸ್ತಾನ ಉಗ್ರ ಪನ್ನು ಬೆದರಿಕೆ

Exit mobile version