Sports Authority of India Recruitment 2023: ಒಟ್ಟು 15 ಹುದ್ದೆಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರವು (Jobs in Sports Authority) ಅರ್ಜಿಗಳನ್ನು ಆಹ್ವಾನಿಸಿದೆ. ನಿರ್ದೇಶಕರ ಹುದ್ದೆಗಳನ್ನು
(Designation Of Director) ಈ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತಿದ್ದು,ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು.
ಅಂದರೆ ಅರ್ಜಿಗಳನ್ನು ಅಂಚೆಯ ಮೂಲಕ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ (Jobs in Sports Authority) ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ )
ಹುದ್ದೆಯ ಹೆಸರು: ನಿರ್ದೇಶಕ
ಒಟ್ಟು ಹುದ್ದೆಗಳ ಸಂಖ್ಯೆ: 15
ಉದ್ಯೋಗ ಸ್ಥಳ: ಅಖಿಲ ಭಾರತ
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಗರಿಷ್ಠ 56 ವರ್ಷಗಳನ್ನು ಮೀರಿರಬಾರದು.
ಇದನ್ನು ಓದಿ: ಪ್ರಧಾನಿ ಮೋದಿ ಇಂದಿನಿಂದ ಐತಿಹಾಸಿಕ ಅಮೆರಿಕ ಪ್ರವಾಸ: ಕಾರ್ಯಕ್ರಮಗಳ ವಿವರ ಹೀಗಿದೆ…
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಮೊದಲು ಲಿಖಿತ ಪರೀಕ್ಷೆ ನಂತರ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 78800 ರಿಂದ 209200 ರೂ.ವರೆಗೆ ನೀಡಲಾಗುತ್ತದೆ.

ಪ್ರಮುಖ ದಿನಾಂಕ:
ಅಭ್ಯರ್ಥಿಗಳು ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-06-2023
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2023
ಅರ್ಜಿ ಕಳುಹಿಸಬೇಕಾದ ವಿಳಾಸ:
The Director (Recruitment), Room No. 210, Sports Authority of India, Head Office, Gate No.10 (East Gate), Jawaharlal Nehru Stadium, Lodhi Road, New Delhi-110003
ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಈ ನೇಮಕಾತಿ ಕುರಿತಾಗಿ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ:- sportsauthorityofindia.nic.in
ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ವಿಜಯ ಟೈಮ್ಸ್ ಚಾನಲ್(Vijaya Times) ಅನ್ನು ಫಾಲೋ ಮಾಡಿ
ರಶ್ಮಿತಾ ಅನೀಶ್