Visit Channel

ಲಸಿಕೆಯ ಪೇಟೆಂಟ್‌ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾಕ್ಕೆ ಜೋ ಬೈಡನ್ ಆಡಳಿತ ಬೆಂಬಲ

joebiden

ವಾಷಿಂಗ್ಟನ್, ಮೇ. 06: ಕೋವಿಡ್ ಲಸಿಕೆಯ ಉತ್ಪಾದನೆ, ಪೂರೈಕೆಯನ್ನು ಹೆಚ್ಚಿಸಲು ಲಸಿಕೆಯ ಪೇಟೆಂಟ್ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡಬೇಕು ಎಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ವಿಶ್ವ ವ್ಯಾಪಾರ ಸಂಘಟನೆ (ಡಬ್ಲ್ಯೂಟಿಒ)ಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಆಡಳಿತ ಬೆಂಬಲಿಸಿದೆ.

ಪೇಟೆಂಟ್ ಜಾರಿಗೆ ಕಾಲಮಿತಿಯ ತಡೆ ನೀಡುವಂತೆ ಡಬ್ಲ್ಯುಟಿಒಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮನವಿ ಮಾಡಿದ್ದವು. ಹಲವಾರು ದೇಶಗಳು ಭಾರತದ ಈ ನಡೆಗೆ ಬೆಂಬಲ ಸೂಚಿಸಿದ್ದವು.

ಈ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಮತ್ತು ದಕ್ಷಿಣ ಆಫ್ರಿಕಾದ ರಾಜತಾಂತ್ರಿಕರು ಅಮೆರಿಕದ ಸೆನೆಟರ್‌ಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಈಗ ಅಮೆರಿಕ ಸಹ ಬೆಂಬಲ ನೀಡಿದೆ.

ಕೋವಿಡ್‌ ಸಾಂಕ್ರಮಿಕವು ಜಾಗತಿಕ ಆರೋಗ್ಯ ಬಿಕ್ಕಟ್ಟಾಗಿದೆ. ಜೋ ಬಿಡೆನ್ ಆಡಳಿತವು ಬೌದ್ಧಿಕ ಆಸ್ತಿ ಸಂರಕ್ಷಣೆಯನ್ನು ಬಲವಾಗಿ ನಂಬುತ್ತದೆ. ಆದರೆ, ಕೋವಿಡ್‌ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಉದ್ದೇಶದಿಂದ ಕೋವಿಡ್‌ ಲಸಿಕೆಗಳಿಗೆ ಪೇಟೆಂಟ್ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವುದನ್ನು ಬೆಂಬಲಿಸುತ್ತದೆ ಎಂದು ಯುಎಸ್ ವ್ಯಾಪಾರ ಪ್ರತಿನಿಧಿ ಕ್ಯಾಥರೀನ್‌ ತೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಸಿಕೆಗಳನ್ನು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡಲು ಈ ಪ್ರಸ್ತಾಪವನ್ನು ಬೆಂಬಲಿಸುವಂತೆ ಒತ್ತಾಯಿಸಿ ಬಹುಪಾಲು ಡೆಮಾಕ್ರಟಿಕ್ ಕಾಂಗ್ರೆಸ್ಸಿಗರು ಅಧ್ಯಕ್ಷ ಜೋ ಬಿಡನ್ ಅವರಿಗೆ ಪತ್ರ ಬರೆದಿದ್ದರು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.