ಕೇಂದ್ರದಿಂದ ಪ್ರಧಾನಿ ಮೋದಿ ಕಳುಹಿಸುವ ಹಣ ಪಡೆಯಬೇಕೆಂದರೆ ಬಿಜೆಪಿಗೆ ಮತ ಹಾಕಿ : ಜೆ.ಪಿ.ನಡ್ಡಾ

Haveri : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೇಂದ್ರದಿಂದ ಕಳುಹಿಸಿದ ಹಣ ಸಮರ್ಪಕವಾಗಿ ಬಳಕೆಯಾಗಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು’ , ಮೋದಿ ಕಳಿಸೋ ಹಣ ರಾಜ್ಯದ ಅಭಿವೃದ್ಧಿಗೆ ಸದ್ಬಳಕೆ ಆಗಬೇಕು ಅಂದರೆ ನೀವು ಬಿಜೆಪಿಗೆ ಮತ ಹಾಕಿ” ಎಂದು ಬಿಜೆಪಿ (JP nadda statement) ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ (J.D.Nadda) ಹೇಳಿದರು.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬುಧವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಬೃಹತ್ ಬಹಿರಂಗ

ಸಮಾವೇಶದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (JP nadda statement) ನಾಮಪತ್ರ ಸಲ್ಲಿಸುತ್ತಿದ್ದಾರೆ.

ಈ ನಾಮಪತ್ರ ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ, ಮುಂದಿನ ಐದು ವರ್ಷಗಳ ಕಾಲ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿದೆ ,

‘ಕರ್ನಾಟಕಕ್ಕೆ ಪ್ರಧಾನಿ ಮೋದಿ (Modi) ಅವರು ಕಳುಹಿಸಿದ ಹಣ ಸಮರ್ಪಕವಾಗಿ ಬಳಕೆಯಾಗಲು ಇಲ್ಲಿ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯಲು ಕಮಲದ ಚಿಹ್ನೆಯನ್ನು ಬೆಂಬಲಿಸಿ ಎಂದು ಕೋರಿದರು.

ಇದನ್ನೂ ಓದಿ : https://vijayatimes.com/price-of-gold-and-silver-decreased/


ಬಡವರಿಗೆ 12 ಸಾವಿರ ಮನೆ ನಿರ್ಮಾಣ ಹಾಗೂ ಇನ್ನಿತರ ಅನೇಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಬೊಮ್ಮಾಯಿ ಅವರು ಮಾಡಿದ್ದಾರೆ.

ಕಿಚ್ಚ ಸುದೀಪ್ (Kiccha Sudeep) ಅವರು ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ. ಅಲ್ಲದೇ ಬಸವರಾಜ್‌ ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ,

ಅತ್ಯಂತ ಕಡಿಮೆ ಅವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದರೆ, ಇನ್ನಷ್ಟು ಸಮಯ ಬೇಕಿದೆ ಎಂದೂ ಸುದೀಪ್‌ ಬಯಕೆ ವ್ಯಕ್ತಪಡಿಸಿದ್ದಾರೆ” ಎಂದರು.

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಕಮಿಷನ್(Commission) , ಕ್ರಿಮಿನಲೈಸೇಷನ್ (Criminalization). ಅಪರಾಧೀಕರಣದ ಪಕ್ಷ. ಕಾಂಗ್ರೆಸ್ ನಾಯಕರು ನಾಯಕರಲ್ಲ.

ಕಾಂಗ್ರೆಸ್ ಮುಖಂಡರು ನೇತಾರರಾಗಿ ಉಳಿದಿಲ್ಲ.

ಅವರು ಎಟಿಎಂ ಮಷಿನ್ ಚಲಾಯಿಸುವ ವ್ಯಕ್ತಿಗಳಾಗಿದ್ದಾರೆ . ಕಾಂಗ್ರೆಸ್ (Congress) ಅವರನ್ನು ಇಲ್ಲಿ ಕೂರಿಸಿದರೆ ಮೋದಿ ಅವರು ರಾಜ್ಯಕ್ಕೆ ಅಭಿವೃದ್ಧಿಗೆ ಸಂಬಂಧಿಸಿದ ಕಳಿಸಿದ ಹಣವನ್ನು (JP nadda statement) ಇವರು ಡೆಲ್ಲಿ ಕಾಂಗ್ರೆಸ್‌ಗೆ ಕಳುಹಿಸುತ್ತಾರೆ.

ಇಂತಹ ಸರ್ಕಾರ ನಿಮಗೆ ಬೇಕಾ? ಕೇಂದ್ರದಿಂದ ಪ್ರಧಾನಿ ಮೋದಿ ಕಳಿಸೋ ಹಣ ರಾಜ್ಯದ ಅಭಿವೃದ್ಧಿಗೆ ಸದ್ಬಳಕೆ ಆಗಬೇಕು ಅಂದರೆ ನೀವು ಬಿಜೆಪಿಗೆ (BJP) ಮತ ಹಾಕಿ” ಎಂದು ಜೆ ಪಿ ನಡ್ಡಾ ಹೇಳಿದರು.


ರಾಜ್ಯದಲ್ಲಿ ಶಾಂತ ವಾತಾವರಣ ಇದೆ ;

ಬಸವರಾಜ್‌ ಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗುತ್ತಿದೆ, ಇಂದು ರಾಜ್ಯದಲ್ಲಿರುವ ಅನೇಕ ಕ್ರಿಮಿನಲ್‌ಗಳು ಜೈಲಿನಲ್ಲಿದ್ದಾರೆ.

ಕರ್ನಾಟಕದಲ್ಲಿ ಪಿಎಫ್ಐ (PFI) ಬ್ಯಾನ್ ಮಾಡಿರುವುದು “ಬಿಜೆಪಿ ಸರ್ಕಾರ (BJP Govt), ಆದರೆ ಸಿದ್ದರಾಮಯ್ಯ (Siddaramaiah) ಪಿಎಫ್ಐ ಬ್ಯಾನ್ ಮಾಡಿದ್ದನ್ನು ಹಿಂಪಡೆಯಬೇಕೆಂದು ಕಾಯುತ್ತಿದ್ದಾರೆ.

ರಾಜ್ಯದಲ್ಲಿ ಪಿಎಫ್ಐ ಬ್ಯಾನ್ ಮುಂದುವರೆಯಬೇಕು ಅಂದರೆ ನಮ್ಮಕಮಲದ ಗುರುತಿಗೆ ಮತ ನೀಡಿ. ರಾಜ್ಯದಲ್ಲಿ ಶಾಂತಿ ಮತ್ತು ವಿಕಾಸಕ್ಕಾಗಿ ಬಿಜೆಪಿಗೆ ಮತ ಹಾಕಬೇಕು. ಈಗಾಗಲೇ ಬೊಮ್ಮಾಯಿ ಅವರನ್ನು ನೀವು ಗೆಲ್ಲಿಸಿದ್ದೀರಿ” ಎಂದರು.

Exit mobile version