Visit Channel

5 ಜಿ ತಂತ್ರಜ್ಞಾನ: ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಾಪಸ್‌ ಪಡೆದ ಜೂಹಿ ಚಾವ್ಲಾ

PC-shortpedia

ನವದೆಹಲಿ, ಜು. 29: 5 ಜಿ ತಂತ್ರಜ್ಞಾನದ ವಿರುದ್ಧದ ತಮ್ಮ ಅರ್ಜಿಯನ್ನು ವಜಾಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಬಾಲಿವುಡ್‌ ನಟಿ ಜೂಹಿ ಚಾವ್ಲಾ ವಾಪಸ್‌ ಪಡೆದಿದ್ದಾರೆ.

5ಜಿ ವೈರ್‌ಲೈಸ್‌ ತಂತ್ರಜ್ಞಾನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ‘ವಜಾಗೊಳಿಸಲಾಗಿದೆ’ ಎನ್ನುವ ಬದಲು ‘ತಿರಸ್ಕರಿಸಲಾಗಿದೆ’ ಎಂದು ಘೋಷಿಸುವಂತೆ ಕೋರಿ ಚಾವ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ದೇಶದಲ್ಲಿ 5 ಜಿ ವೈರ್‌ಲೆಸ್ ನೆಟ್‌ವರ್ಕ್‌ಗಳನ್ನು ಸ್ಥಾಪಿಸುವುದರ ವಿರುದ್ಧ ಜೂನ್‌ ತಿಂಗಳಲ್ಲಿ ಚಾವ್ಲಾ ಮತ್ತು ಇತರ ಇಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್, ₹20 ಲಕ್ಷ ದಂಡ ವಿಧಿಸಿತ್ತು. ಇದು ಪ್ರಚಾರಕ್ಕಾಗಿ ಮಾಡಿದ್ದು ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.