ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ಕರ್ನಾಟಕಾದ ನಾಗರತ್ನ ಆಯ್ಕೆ.

ನವದೆಹಲಿ ಸೆ 1 : ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಕರ್ನಾಟಕ ರಾಜ್ಯ ಹೈಕೋರ್ಟ್‌ನಲ್ಲಿ ನ್ಯಾಯಾಧೀಶ‌ರಾಗಿದ್ದ ನಾಗರತ್ನ ಸೇರಿದಂತೆ ಒಟ್ಟು 9 ಮಂದಿ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕರ್ನಾಟಕ ರಾಜ್ಯ ಹೈಕೋರ್ಟ್‌ನಲ್ಲಿ ನ್ಯಾಯಾಧೀಶ‌ರಾಗಿದ್ದ ನಾಗರತ್ನ ಬಿ‌ ವಿ ಸೇರಿದಂತೆ ಒಟ್ಟು ಒಂಬತ್ತು ಮಂದಿ ನ್ಯಾಯಮೂರ್ತಿ‌ಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರಲ್ಲಿ ನ್ಯಾಯಮೂರ್ತಿ ಸಿ.ಟಿ. ರವೀಂದ್ರ ಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್, ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ, ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸುಪ್ರೀಂಕೋರ್ಟ್ ಆವರಣದಲ್ಲಿ ನಡೆದ ಈ ಕಾರ್ಯಕ್ರಮ‌ದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ನೂತನ ನ್ಯಾಯಮೂರ್ತಿ‌ಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಕರ್ನಾಟಕದಿಂದ ಅಯ್ಕೆಯಾಗಿರುವ ನಾಗರತ್ನ ಬಿ‌.ವಿ. ಅವರಿಗೆ ಗಣ್ಯರು ಶುಭಾಷಯ ತಿಳಿಸಿದ್ದಾರೆ.

Exit mobile version