ಕನ್ನಡಿಗನಿಗೆ ಒಲಿದ ಉಪನಾಯಕತ್ವ ಪಟ್ಟ

 ಮುಂಬೈ ಡಿ 18 : ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಟೆಸ್ಟ್ ತಂಡಕ್ಕೆ ಕೆ.ಎಲ್. ರಾಹುಲ್‌ ಅವರನ್ನು ಉಪ ನಾಯಕರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ.  ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ 3 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಟೆಸ್ಟ್ ತಂಡದಲ್ಲಿ ಅಜಿಂಕ್ಯ ರಹಾನೆ ಅವರನ್ನು ಉಪನಾಯಕ ಸ್ಥಾನದಿಂದ ಕೆಳಗಿಳಿಸಿ ರೋಹಿತ್ ಶರ್ಮಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ರೋಹಿತ್ ಶರ್ಮಾಗೆ ಸ್ನಾಯು ಸೆಳೆತ ಉಂಟಾಗಿದ್ದರಿಂದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದು, ಉಪನಾಯಕರನ್ನಾಗಿ ರಾಹುಲ್ ಅವರನ್ನು ಬಿಸಿಸಿಐ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ಕೆಲ ದಿನಗಳಿಂದ ಟೀಂ ಇಂಡಿಯಾದಲ್ಲಿ ನಾಯಕತ್ವದ ಫೈಟ್ ಜೋರಾಗಿದೆ. ಈ ನಡುವೆ ಸೀಮಿತ ಓವರ್‌ಗಳ ತಂಡದ ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾರನ್ನು ನಾಯಕನ್ನಾಗಿ ಬಿಸಿಸಿಐ ನೇಮಿಸಿದೆ. ಜೊತೆಗೆ ಟೆಸ್ಟ್ ತಂಡದ ಉಪನಾಯರಾಗಿದ್ದ ಅಜಿಂಕ್ಯಾ ರಹಾನೆಯನ್ನು ಕೆಳಗಿಳಿಸಿ ರೋಹಿತ್ ಶರ್ಮಾರನ್ನು ಟೆಸ್ಟ್ ತಂಡದ ಉಪನಾಯಕನ್ನಾಗಿ ಆಯ್ಕೆ ಮಾಡಿತ್ತು. ಆದರೆ ಸರಣಿ ಆರಂಭಕ್ಕೂ ಮೊದಲು ರೋಹಿತ್ ಗಾಯಳುವಾಗಿ ತಂಡದಿಂದ ಹೊರಬಿದ್ದು, ಬೆಂಗಳೂರಿನ NCAನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Exit mobile version