Chamarajanagar: ಗೃಹಸಚಿವ ಡಾ.ಜಿ.ಪರಮೇಶ್ವರ್ (K Venkatesh Slams GParameshwar) ಅವರು ನಿಗಮ ಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ನನ್ನನ್ನು ಯಾರು ವಿಚಾರಿಸಿಲ್ಲ,
ಯಾರು ಏನುಕೂಡಾ ಕೇಳಿಲ್ಲ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ತಿರುಗೇಟು ನೀಡಿದ್ದು, ಇದನ್ನ ಎಲ್ಲರನ್ನ ಕೇಳಿ ಮಾಡಲು ಆಗುತ್ತಾ?
ಬೇಕಾದರೆ ಅವರ ಅಭಿಪ್ರಾಯವನ್ನ (K Venkatesh Slams GParameshwar) ತಿಳಿಸಬಹುದು ಅಷ್ಟೇ ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಯೋದ್ಯೆಯಲ್ಲಿ ನಿರ್ಮಿತವಾಗಿರುವ ರಾಮಲಲ್ಲ ಪ್ರತಿಷ್ಠಾಪನೆಯು ಬಿಜೆಪಿಗೆ ಲಾಭವಾಗಲಿದೆಯಾ ಎಂಬ ಪ್ರಶ್ನೆಗೆ ವೆಂಕಟೇಶ್ (Venkatesh) ಅವರು
ಪ್ರತಿಕ್ರಿಯಿಸಿದ್ದು, ನಾವು ರಾಜಕಾರಣಿಗಳು. ಪ್ರತಿ ಸಾವಿಗು ಹೋಗುತ್ತೇವೆ ಮದುವೆಗೂ ಹೋಗುತ್ತೇವೆ. ಅಷ್ಟೇ ಯಾಕೆ ಗುಡ್ಲು ಕೂರಿಸಿದಕ್ಕೂ ಹೋಗುತ್ತೇವೆ, ನಾಮಕರಣಕ್ಕೂ ಹೋಗುತ್ತೇವೆ.
ಇವೆಲ್ಲಾ ವರ್ಕೌಟ್ ಆಗುತ್ತಾ? ಇದೆಲ್ಲ ವರ್ಕೌಟ್ ಆಗಲ್ಲ ಎಂದರು.
ಸಚಿವ ಸತೀಶ್ ಜಾರಕಿಹೊಳಿ (Sathish Jarakiholi) ಯವರು, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿರುವ ವಿಚಾರವಾಗಿ ಮಾತನಾಡಿದ ಕೆ ವೆಂಕಟೇಶ್ ಅವರು
ಲೋಕೋಪಯೋಗಿ ಒಲಾಖೆ ಸಚಿವರು. ಹಾಗಾಗಿ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ ಎಂದು ಕೇಳಿದರು.
ನಿಗಮ ಮಂಡಳಿ ನೇಮಕಾತಿ ಹೈಕಮಾಂಡ್ ಹಾಗೂ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ (Siddaramaiah, D K Shivakumar) ಮಧ್ಯೆ ಹಗ್ಗಜಗ್ಗಾಟ ನಡೆದಿದೆ. ಹೈಕಮಾಂಡ್ಗೆ
ಕಳುಹಿಸದ ಹೆಸರುಗಳು ನಿಗಮ ಮಂಡಳಿ ನೇಮಕಾತಿ ಪಟ್ಟಿಯಲ್ಲಿ ಎಂಟ್ರಿಯಾಗಿದ್ದು, ಇದು ಸಿಎಂ, ಡಿಸಿಎಂಗೆ ಶಾಕ್ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು
ಅಂಬಿಗರ ಚೌಡಯ್ಯ ಕಾರ್ಯಕ್ರಮಕ್ಕೆ ಹೋಗದೇ ತಾಜ್ ವೆಸ್ಟ್ ಎಂಡ್ನಲ್ಲಿ ಸೇರಿ ಚರ್ಚಿಸಿದ್ದರು

ರಾಜ್ಯ ಕಾಂಗ್ರೆಸ್ (Congress) ಸರ್ಕಾರಕ್ಕೆ ನಿಗಮ ಮಂಡಳಿ ನೇಮಕ ವಿಚಾರ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ
ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೀಗ ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ ನಡುವಣ ಸಂಘರ್ಷವಾಗಿ ಮಾರ್ಪಟ್ಟಿದೆ.
ಹೈಕಮಾಂಡ್ ಕಳುಹಿಸಿರುವ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಕಾಣಿಸಿವೆ ಎನ್ನಲಾಗಿದ್ದು, ಇದನ್ನು ಅಂತಿಮಗೊಳಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿಸುತ್ತಿಲ್ಲ.
ಈ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಮಾತುಕತೆಯನ್ನೂ ನಡೆಸಿದ್ದಾರೆ.
ಜನವರಿ (Janauary) 26ರಂದು ನಿಗಮ ಮಂಡಳಿ ಕುರಿತು ಮತ್ತೆ ಚರ್ಚಿಸಲು ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರಲಿದ್ದು, ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಅದೇ ದಿನ ಎಐಸಿಸಿ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ (Mallikarjun Kharge) ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಖರ್ಗೆ ಉಪಸ್ಥಿತಿಯಲ್ಲೇ ಮತ್ತೊಂದು ಸುತ್ತಿನ ಚರ್ಚೆ ನಡೆಯುವ ಸಾಧ್ಯತೆ ಇದೆ.
- ಭವ್ಯಶ್ರೀ ಆರ್ ಜೆ