ನವದೆಹಲಿ, ಡಿ. 16: ಸಕ್ಕರೆ ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ ನೀಡಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಬುಧವಾರ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 60 ಲಕ್ಷ ಟನ್ ಸಕ್ಕರೆ ರಫ್ತು ಮಾಡಲಾಗುವುದು. ಸಚಿವ ಸಂಪುಟದ ನಿರ್ಧಾರದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭವಾಗಲಿದೆ. ಸಬ್ಸಿಡಿ ಮೊತ್ತ ನೇರವಾಗಿ ರೈತರ ಖಾತೆಗೆ ಸೇರಲಿದೆ ಎಂದು ಅವರು ಹೇಳಿದರು.