ಬೆಂಗಳೂರು, ಜ. 14: ಸ್ಯಾಂಡಲ್ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿರುವ ವಿಷಯ ಬಹಿರಂಗವಾದ ಬೆನ್ನಲ್ಲೇ ಸುದೀಪ್ ಅವರ ಪಾತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.
‘ಕಬ್ಜ’ ಚಿತ್ರದಲ್ಲಿ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ನಿರ್ದೇಶಕ ಆರ್. ಚಂದ್ರು, ಕಿಚ್ಚನ ಪಾತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಸುದೀಪ್, ‘ಭಾರ್ಗವ್ ಭಕ್ಷಿ’ ಹೆಸರಿನ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಅಲ್ಲದೇ 1947ರಿಂದ 1986ರವರೆಗಿನ ಕಾಲಘಟ್ಟದ ಭಕ್ಷಿ, ಮಾಫಿಯಾ ಮುಗಿಸಲು ಹೋರಾಡುತ್ತಾನೆ ಎಂದು ಹೇಳಲಾಗಿದೆ. ಈ ನಡುವೆ, ಕಬ್ಜ ಚಿತ್ರದಲ್ಲಿ ಅಭಿನಯಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕಿಚ್ಚ ಸುದೀಪ್, ಟ್ವೀಟ್ ಮೂಲಕ ತಮ್ಮ ಖುಷಿ ಹಂಚಿಕೊಂಡಿದ್ದಾರೆ.