Visit Channel

ಮಹಾತ್ಮ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ಕಾಳಿಚರಣ್ ಬಂಧನ

ರಾಯ್‌ಪುರ್ ಡಿ 30 : ಮಹಾತ್ಮ ಗಾಂಧಿ ಬಗ್ಗೆ ಅವಳೇನಕಾರಿ ಕುರಿತು ಹೇಳಿಕೆ ನೀಡಿರುವ ಸನ್ಯಾಸಿ ಕಾಳಿಚರಣ್ ಮಹರಾಜ್‌ ಅವರನ್ನ ಪೊಲೀಸರ್‌ ಬಂಧಿಸಿದ್ದಾರೆ ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು. 

ರಾಯ್‌ ಪುರ್‌ ಮಾಜಿ ಮೇಯರ್‌ ಪ್ರಮೋದ್‌ ದುಬೆ ನೀಡಿದ್ದ ದೂರು ಆಧರಿಸಿ ತಿಕ್ರಪಾರಾ ಠಾಣೆ ಪೊಲೀಸರು ಕಾಳಿ ಚರಣ್ ವಿರುದ್ಧ ಐಪಿಸಿ ಸೆಕ್ಷನ್ 505 (2) 294 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ರಾಯ್‌ ಪುರ್‌ ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಾಳಿಚರಣ್‌ ಮಹಾರಾಜ್‌ ಚತ್ತೀಸಘಡದಿಂದ ನಾಪತ್ತೆಯಾಗಿದ್ದರು ಎಂದು ವರದಿಯಾಗಿದೆ.

ಆರೋಪಿ ಕಾಳಿಚರಣ್‌ನನ್ನು ಬಂಧಿಸಲು ಪೊಲೀಸರು ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ರಾಜ್ಯಗಳಿಗೆ ವಿಶೇಷ ತಂಡಗಳನ್ನು ಕಳುಹಿಸಲಾಗಿತ್ತು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ

ಗಾಂಧೀಜಿಯ ಅವಹೇಳನ ಕುರಿತು ಮತ್ತೆ ಸಮರ್ಥಿಸಿಕೊಂಡಿರುವ ಕಾಳಿಚರಣ್, “ನನಗೆ ನನ್ನ ಹೇಳಿಕೆ ಬಗ್ಗೆ, ಯಾವುದೇ ಪಶ್ಚಾತ್ತಾಪವಿಲ್ಲ. ಮನಸ್ಸಿನಲ್ಲಿ ಯಾವುದೋ ಒಂದು ವಿಷಯದ ಬಗ್ಗೆ, ಮನಸ್ಸಿನಲ್ಲಿ ಉದ್ಯೋಗವಿದ್ಯಾಗ ಬೈಗುಳ ಬರುತ್ತವೆ. ಹೀಗಾಗಿ ನಾನು ಏನೇ ಹೇಳಿದರೂ ಅದು ನನ್ನ ಮನದಾಳದ ನೋವಾಗಿತ್ತು” ಎಂದಿದ್ದರು.

ಕಾಳಿಚರಣ್ ಮಹಾರಾಜ್ ವಿರುದ್ಧ ಕೋಮು ಪ್ರಚೋದನೆ ಮತ್ತಿತರ ದುರುದ್ದೇಶಪೂರಿತ ಭಾಷಣ ಮತ್ತು ಐಪಿಸಿ ಸೆಕ್ಷನ್ 294,295ಎ.298, 505 (2) ಮತ್ತು 5062 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.