ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ 3000 ಕೋಟಿ ಅನುದಾನ ಘೋಷಿಸಿದ ಸಿಎಂ

ಕಲಬುರಗಿ ಸೆ 17 : ಕಲ್ಯಾಣ ಕರ್ನಾಟಕ ಅಭಿವೃದ್ದಿಗಾಗಿ  ಕೆಕೆಆರ್ ಡಿಬಿಗೆ ವಾರ್ಷಿಕ 3000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿಎಂ ಬಾಸಾವರಾಜ ಬೊಮ್ಮಾಯಿ ತಿಳಿಸಿದ್ದಾರೆ

 

 ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ದಿನಾಚರಣೆಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು ಈವರೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ರೂ. 8000 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಈ ಪೈಕಿ ಇನ್ನೂ 2000 ಕೋಟಿ ರೂ. ಖರ್ಚಾಗದೆ ಉಳಿದಿದೆ. ಈ ಉಳಿಕೆ ಹಣವನ್ನು ಮಾಚ್೯ ಅಂತ್ಯದೊಳಗೆ ಸರಿಯಾದ ದಿಕ್ಕಿನಲ್ಲಿ ಖರ್ಚು ಮಾಡಿ ತೋರಿಸಿದರೆ ಮಾಚ್೯ ಬಳಿಕ ರೂ.3000 ಕೋಟಿ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು

ಕಲಬುರಗಿ ನಗರದಲ್ಲಿ ಮುಂದಿನ ಎರಡು ತಿಂಗಳಲ್ಲಿ ಜಾಗತಿಕ ಹೂಡಿಕೆದಾರರ ಶೃಂಗ ನಡೆಸಲಾಗುವುದು ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈವರೆಗೆ ನಂಜುಂಡಪ್ಪ ವರದಿ ಅನುಷ್ಠಾನ ಯಾವ ಪ್ರಮಾಣದಲ್ಲಿ ಆಗಿದೆ ಎಂಬುದರ ಮೌಲ್ಯಮಾಪನ ಕೈಗೊಳ್ಳಲಾಗುವುದು. ಈ ಮೌಲ್ಯಮಾಪನದ ಬಳಿಕ ಪುನಃ ವರದಿ ಅನುಷ್ಠಾನವನ್ನು ಮುಂದಿನ ಐದು ವರ್ಷಗಳಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಿಸಿದರು. ಕೆಕೆಆರ್.ಡಿ.ಬಿಗೆ ಮುಂದಿನ ಕೆಲ ದಿನಗಳಲ್ಲಿ ಪ್ರತ್ಯೇಕವಾಗಿ ಐಎಎಸ್ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಿಸಲಾಗುವುದು. ಎಂದು ಅವರು ತಿಳಿಸಿದರು.

Exit mobile version