ಕಂಬಳಕ್ಕೆ ಬ್ರಿಜ್ ಭೂಷಣ್ ಆಹ್ವಾನ ರದ್ದು: ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ

Mangalore: ಮೊಟ್ಟ ಮೊದಲ ಬಾರಿಗೆ ಕರಾವಳಿಯ ಪ್ರಸಿದ್ಧ ಕಂಬಳಕ್ಕೆ (Kambala 2023 bangalore) ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಿಜೆಪಿ

ಸಂಸದ ಬ್ರಿಜ್ ಭೂಷಣ್ (Brij Bhushan)ಅವರನ್ನು ಆಹ್ವಾನಿಸಲಾಗಿದೆ. ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಕುಸ್ತಿ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಕರೆದಿರುವುದು ಎಷ್ಟು ಸರಿ ಎಂಬ ಬಗ್ಗೆ ಸಾಮಾಜಿಕ

ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದವು. ಹಾಗಾಗಿ ತಾವೇ ಖುದ್ದಾಗಿ ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಬ್ರಿಜ್ ಭೂಷಣ್ ಪತ್ರ ಬರೆದು ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ (Palace Ground) ನವೆಂಬರ್ 25 ಮತ್ತು 26ರಂದು ಕಂಬಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾರತದ ಕುಸ್ತಿ

ಫೆಡರೇಷನ್ ಮಾಜಿ ಆಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಅತಿಥಿಯಾಗಿ ಆಹ್ವಾನ ನೀಡಲು ಕುಸ್ತಿ ಅಸೋಸಿಯೇಷನ್ (Wrestling Association) ಹಾಗೂ ಸಿದ್ದಿ ಜನಾಂಗ ಮನವಿ

ಮಾಡಿತ್ತು. ಮನವಿ ಮೇರೆಗೆ ಕಂಬಳ ಸಮಿತಿ ಆಹ್ವಾನ (Kambala 2023 bangalore) ನೀಡಿತ್ತು.

ಈ ಸಂಬಂಧ ವಿರೋಧ ಹಿನ್ನಲೆ ಬ್ರಿಜ್ ಭೂಷಣ್ ಅವರಿಗೆ ಕರೆ ಮಾಡಿ ಕಂಬಳ ಸಮಿತಿ ವಿವರ ನೀಡಿದ್ದು ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಪತ್ರ ಬರೆದು ಬ್ರಿಜ್ ಭೂಷಣ್ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಕಂಬಳ ಸಮಿತಿ ಮುಖ್ಯಸ್ಥ ಅಶೋಕ್ ರೈ (Ashok Rai) ಟಿವಿ9ಗೆ ಮಾಹಿತಿ‌ ನೀಡಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನಲೆ ಬ್ರಿಜ್ ಅವರ ಆಹ್ವಾನ ರದ್ದುಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು ತುಳುಕೂಟಕ್ಕೆ 50ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿರುವ ಬೆಂಗಳೂರು ತುಳುಕೂಟ ಮೊಟ್ಟಮೊದಲು ಬಾರಿಗೆ ರಾಜಾಧಾನಿಯಲ್ಲಿ ಕಂಬಳವನ್ನ ನಡೆಸುತ್ತಿರುವ

ಹಿನ್ನೆಲೆ ಅರಮನೆ ಮೈದಾನದ ಗೇಟ್ 5ರಲ್ಲಿ 151 ಮೀ ಉದ್ದದ ಕಂಬಳ‌ದ ಕೆರೆ ಅಂದರೆ ಟ್ರ್ಯಾಕ್ ನಿರ್ಮಾಣವಾಗಿದೆ. ಬಹಳ ವಿಶೇಷ ಎಂದರೆ ಇದು ಅತಿ ಉದ್ದದ ಟ್ರ್ಯಾಕ್ ‌ಗಳಲ್ಲಿ ಒಂದಾಗಿದ್ದು, ಶೇಕಡ

100 ರಷ್ಟು ಕೆರೆ ಕೆಲಸ ಪೂರ್ಣವಾಗಿದೆ. ಇನ್ನೂ ಕಂಬಳಕ್ಕೆ ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,ಇದೇ ತಿಂಗಳ 25 ಹಾಗೂ 26 ರಂದು ಬೆಂಗಳೂರು ಕಂಬಳ‌ ನಡೆಯಲಿದೆ.

8 ಸಾವಿರಕ್ಕೂ ಅಧಿಕ ಜನರು ಕುಳಿತುಕೊಂಡು ನೋಡಲು ಅವಕಾಶ ಮಾಡಿಕೊಡಲಾಗಿದೆ. 150 ಕೌಂಟರ್ ಗಳನ್ನ ತೆರೆಯಲಾಗುತ್ತೆ.

48 ಗಂಟೆಗಳ ಕಾಲ ನಡೆಯಲಿರುವ ಈ ಸ್ಪರ್ಧೆಯಲ್ಲಿ 150 ರಿಂದ 160 ಜೊತೆ ಕೋಣಗಳು ಭಾಗಿಯಾಗಲಿವೆ. 130 ಜೊತೆ ಕೋಣ ರಿಜಿಸ್ಟರ್ ಆಗಿದ್ದು ಅದರಲ್ಲಿ ಆಯ್ಕೆ ಆದ ಕೋಣ

ತರಲು ಯೋಜನೆ ರೂಪಿಸಲಾಗಿದೆ. ಎಲ್ಲ ಪಕ್ಷದವರು ಜೊತೆಗೆ ಸಾಂಸ್ಕೃತಿಕ ಹಾಗೂ ಕಂಬಳ ಎರಡು ಭಾಗ ಮಾಡಲಾಗಿದೆ . ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹಾಲಿವುಡ್, ಬಾಲಿವುಡ್ ನ (Hollywood,

Bollywood) ಖ್ಯಾತ ನಟ ನಟಿಯರು ಬರುವವರಿದ್ದು ಕಂಬಳ ಯಶಸ್ವಿಯಾಗಲಿದೆ.

ಇದನ್ನು ಓದಿ: ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನಿಶ್ಚಿತ: ಕಾಂಗ್ರೆಸ್​​ನಲ್ಲಿ ಕಂಪನ ಸೃಷ್ಟಿಸಿದ ಶಾಸಕನ ಹೇಳಿಕೆ

Exit mobile version