Visit Channel

ನಟಿ ಕಂಗನಾಗೆ ಜೀವ ಬೆದರಿಕೆ, ಪೊಲೀಸ್‌ ಮೊರೆ ಹೋದ ಬಾಲಿವುಡ್ ನಟಿ

ನವದೆಹಲಿ : ಬಾಲಿವುಡ್‌ ನಟಿ ಕಂಗನಾ ರಣಾವತ್‌ಗೆ ಜೀವ ಬೆದರಿಕೆ ಬಂದ ಹಿನ್ನಲೆಯಲ್ಲಿ ಅವರು ಈ ಬಗ್ಗೆ FIR ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೃಷಿ ಕಾನೂನು (Farm laws) ಪ್ರತಿಭಟನಕಾರರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಕಾರಣ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಇದೀಗ, ನಟಿ ಕಂಗನಾ ರಣಾವತ್ (Kangana Ranaut) ತಮಗೆ ಕೊಲೆ ಬೆದರಿಕೆಗಳು ಬರುತ್ತಿರುವುದರಿಂದ ಎಫ್‌ಐಆರ್ ದಾಖಲಿಸಿರುವುದಾಗಿ ಹೇಳಿದ್ದಾರೆ. 

ಈ ಕುರಿತು ಇನ್‌ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಕಂಗನಾ, ತನಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ, ಕಾಂಗ್ರೆಸ್ ನಾಯಕಿ  ಸೋನಿಯಾ ಗಾಂಧಿ (Sonia Gandhi) ಅವರನ್ನು ಕೋರಿದ್ದಾರೆ. 

ಅಮೃತಸರದ ಗೋಲ್ಡನ್ ಟೆಂಪಲ್‌ನಲ್ಲಿನ ಫೋಟೋವೊಂದನ್ನು ಹಂಚಿಕೊಂಡಿರುವ  ನಟಿ ಕಂಗನಾ ರಣಾವತ್, ತಮಗೆ  ಬೆದರಿಕೆ ಹಾಕಿದವರ (death threats) ವಿರುದ್ಧ ಎಫ್‌ಐಆರ್ (FIR) ಹಾಕಿರುವುದಾಗಿ ತಿಳಿಸಿದ್ದಾರೆ. ತನಗೆ ಏನಾದರೂ ಆದರೆ, “ದ್ವೇಷ ಮತ್ತು ವಾಕ್ಚಾತುರ್ಯದ ರಾಜಕೀಯ ಮಾಡುವವರು ಅದಕ್ಕೆ ಸಂಪೂರ್ಣ ಹೊಣೆಗಾರರಾಗುತ್ತಾರೆ” ಎಂದಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.