ಕಂಗನಾ ಪ್ರಕಾರ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ

ನವದೆಹಲಿ ನ 12 : ಭಾರತಕ್ಕೆ (india)  ನೈಜ ಸ್ವಾತಂತ್ರ್ಯ ದೊರಕಿದ್ದು 2014ರಲ್ಲಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ. 1947ರಲ್ಲಿ ನಮಗೆ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಭಿಕ್ಷೆ ಎಂದು ಪದ್ಮಶ್ರೀ ಪುರಸ್ಕೃತ ಬಾಲಿವುಡ್‌ ನಟಿ (bollywood actress) ಕಂಗನಾ ರಾಣಾವತ್‌ (Kangana ranaut) ಹೇಳಿದ್ದಾರೆ. ಅವರ ಈ ಹೇಳಿಕೆ  ಇದೀಗ ತೀವ್ರ ವಿವಾದಕ್ಕೆ ಗುರಿಯಾಗಿದೆ.

ಇದೀಗ, ಕಂಗನಾ ರನೌತ್, ನೀಡಿರುವ ಹೇಳಿಕೆ ಬಿಜೆಪಿ ಸಂಸದ ವರುಣ್ ಗಾಂಧಿ (Varun Gandhi) ಅವರನ್ನು ಕೆರಳಿಸಿದೆ. ಕಂಗನಾ ಹೇಳಿಕೆಗೆ ಟ್ವೀಟ್ ಮೂಲಕ ವರುಣ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಂಗನಾ ರನೌತ್ ಹೇಳಿಕೆ ಮಹಾತ್ಮಾ ಗಾಂಧಿ, ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಎಂದು ವರುಣ್ ಗಾಂಧಿ ಬಣ್ಣಿಸಿದ್ದಾರೆ.

ಒಮ್ಮೆ ಮಹಾತ್ಮ ಗಾಂಧಿಯವರ (Mahatma Gandhi) ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಮತ್ತೆ ಗಾಂಧಿಜಿ ಹಂತಕನ ಗೌರವ. ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆಯೇ ತಿರಸ್ಕಾರ. ಇಂಥಹ ಆಲೋಚನೆಯನ್ನು ಹುಚ್ಚುತನ ಎನ್ನಬೇಕೋ ಅಥವಾ ದೇಶದ್ರೋಹ ಎಂದು ಕರೆಯಬೇಕೋ ಎಂದು ಪ್ರಶ್ನಿಸಿ ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. 

Exit mobile version