ಕನ್ನಯ್ಯ ಕುಮಾರ್ ಮತ್ತು ಜಿಗ್ನೇಶ್ ಕಾಂಗ್ರಸ್‌ಗೆ ಸೇರ್ಪಡೆ

 ನವದೆಹಲಿ ಸೆ 21 : ಜೆಎನ್ ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಅವರು ಕಾಂಗ್ರೆಸ್ ಪಕ್ಷ ಸೇರಲು ಮಾತುಕತೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದ್ದು ಅಕ್ಷೋಬರ್‌ 2ರಂದು ಕನ್ನಯ್ಯ ಮತ್ತು   ಜಿಗ್ನೇಶ್‌ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಕನ್ನಯ್ಯ ಕುಮಾರ್ 2019 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಿಪಿಐ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು, ಆದರೆ ಆಗ ಬಿಜೆಪಿಯ ಗಿರ್‌ರಾಜ್ ಸಿಂಗ್ ವಿರುದ್ಧ ಸೋತರು.ಅಂದಿನಿಂದ ಅವರು ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿಲ್ಲ.ಈಗ ಅವರು ಕಾಂಗ್ರೆಸ್ ನಲ್ಲಿ ಹೊಸ ರಾಜಕೀಯ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ

ಮೂಲಗಳ ಪ್ರಕಾರ ಕಾಂಗ್ರೆಸ್‌ನಲ್ಲಿ ತಮ್ಮ ಜವಾಬ್ದಾರಿ ಏನು ಎಂಬುದನ್ನು ಚರ್ಚಿಸಲು ಈಗಾಗಲೇ ಕನ್ಹಯ್ಯಾ ಕುಮಾರ್‌ ಎರಡು ಬಾರಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಜೊತೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಜತೆಗೂ ಮಾತುಕತೆ ನಡೆಸಿದ್ದಾರೆ

ಜಿಗ್ನೇಶ್‌ ಮೇವಾನಿಯ ಅವರು ಗುಜರಾತ್‌ನ ವಡ್ಗಾಮ್‌ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು ದಲಿತ ನಾಯಕ ಜಿಗ್ನೇಶ್‌ ಮೇವಾನಿಯನ್ನು ಗುಜರಾತ್‌ ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ಹೇಳಿವೆ.

ಒಟ್ಟಿನಲ್ಲಿ ಒಂದು ಹಂತದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಇವರು ಇದೀಗ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಎಲ್ಲಾ ಸಾಧ್ಯತೆಗಳಿದೆ.

Exit mobile version