ಕನ್ನಡದ ಕೀರ್ತಿ ಜಾಗತಿಕ ಮಟ್ಟಕ್ಕೆ (Kannada in AI science says DKShivakumar) ಏರಲಿ: ಸಿಎಂ ಡಿ.ಕೆ. ಶಿವಕುಮಾರ್
ಎಐ, ವಿಜ್ಞಾನ ಮತ್ತು ಡಿಜಿಟಲ್ ತಂತ್ರಜ್ಞಾನದಲ್ಲೂ ಕನ್ನಡದ ಬಳಕೆ ಹೆಚ್ಚಿಸುವ ಅಗತ್ಯಕ್ಕೆ ಸಿಎಂ ಒತ್ತು
ಕಚೇರಿ, ವ್ಯಾಪಾರ, ಸಾರ್ವಜನಿಕ ಸಂವಹನದಲ್ಲೂ ಕನ್ನಡಕ್ಕೆ ಮೊದಲ ಆದ್ಯತೆ ನೀಡುವಂತೆ ಕರೆ
Bengaluru : ಕನ್ನಡ ಭಾಷೆ ಕೇವಲ ಸಾಹಿತ್ಯ, ಸಂಸ್ಕೃತಿ ಮತ್ತು ಸಂವಹನಕ್ಕೆ (Kannada in AI science says DKShivakumar) ಸೀಮಿತವಾಗದೆ, ಕೃತಕ ಬುದ್ಧಿಮತ್ತೆ (ಎಐ), ವಿಜ್ಞಾನ, ನವೋದ್ಯಮಗಳು ಹಾಗೂ ಡಿಜಿಟಲ್ ತಂತ್ರಜ್ಞಾನದ ಕ್ಷೇತ್ರಗಳಲ್ಲಿಯೂ ಪ್ರಬಲ ಭಾಷೆಯಾಗಿ ಬೆಳೆಯಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಯ ವ್ಯಕ್ತಪಡಿಸಿದ್ದಾರೆ.
ಕನ್ನಡದ ಶಕ್ತಿಯನ್ನು ಬಳಸಿಕೊಂಡು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಮರ್ಥ್ಯ ನಮ್ಮಲ್ಲಿದೆ. ಅದಕ್ಕಾಗಿ ಆಧುನಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿಯೂ ಕನ್ನಡದ ಬಳಕೆ ಹೆಚ್ಚಾಗಬೇಕು ಎಂದು ಅವರು ಕರೆ ನೀಡಿದ್ದಾರೆ.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ 71ನೇ ಕನ್ನಡ ರಾಜ್ಯೋತ್ಸವದ (Kannada Rajyotsava) ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ
ಸಾಧನೆ ಮಾಡಿದ 71 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಮಾತನಾಡಿದರು.
ಒಂದು ಭಾಷೆ ಉಳಿಯಬೇಕಾದರೆ ಅದನ್ನು ಕೇವಲ ಪ್ರೀತಿಸಿದರೆ ಸಾಲದು, ದಿನನಿತ್ಯದ (Kannada in AI science says DKShivakumar) ಬದುಕಿನಲ್ಲಿ ಹೆಚ್ಚು ಹೆಚ್ಚು
ಬಳಸಬೇಕು. ಜನರಿಗೆ ಆ ಭಾಷೆಯನ್ನು ಕಲಿಯುವ ಮತ್ತು ಬಳಸುವ ಅಗತ್ಯ ಸೃಷ್ಟಿಯಾಗಬೇಕು. ಆಗ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕವನ್ನು ದೇಶದ ಶಕ್ತಿಯನ್ನಾಗಿ ರೂಪಿಸುವ ದೂರದೃಷ್ಟಿಯೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇತರ ಭಾಷೆಗಳನ್ನು ಗೌರವಿಸುವುದರ ಜತೆಗೆ
ಕನ್ನಡವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಕನ್ನಡವನ್ನು ಪ್ರೀತಿಸುವುದು ಎಂದರೆ ಬೇರೆ ಭಾಷೆಗಳನ್ನು ದ್ವೇಷಿಸುವುದಲ್ಲ.
ಆದರೆ ಕರ್ನಾಟಕದಲ್ಲಿ ಕನ್ನಡವೇ ಮೊದಲ ಭಾಷೆಯಾಗಿರಬೇಕು. ಸರ್ಕಾರಿ ಕಚೇರಿಗಳು, ವ್ಯಾಪಾರ ವಹಿವಾಟುಗಳು ಮತ್ತು ಸಾರ್ವಜನಿಕ ಸಂವಹನ ಸೇರಿದಂತೆ ದೈನಂದಿನ ಚಟುವಟಿಕೆಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದರು.
ಅಲ್ಲದೆ, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಟಿ (IT) , ಬಿಟಿ ಕಂಪನಿಗಳು ಸೇರಿದಂತೆ ಖಾಸಗಿ ಸಂಸ್ಥೆಗಳು ಮತ್ತು ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಆದ್ಯತೆ ನೀಡುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಈ ಸಮಾರಂಭದಲ್ಲಿ ಕರ್ನಾಟಕದ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ (B. V. Acharya) , ಹಿರಿಯ ನಟ ಅಶೋಕ್, ಯಕ್ಷಗಾನ ಕಲಾವಿದ ಗೋಪಾಲ ಗಾಣಿಗ
(Gopal Ganiga) , ಲೇಖಕಿ ಹಾಗೂ ಸಂಶೋಧಕಿ ಇಂದಿರಾ ಹೆಗಡೆ, ರಾಜಕಾರಣಿ ಕಾಗೋಡು ತಿಮ್ಮಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳ 71 ಸಾಧಕರನ್ನು ಗೌರವಿಸಲಾಯಿತು.
ಪ್ರಶಸ್ತಿ ಪುರಸ್ಕೃತರಲ್ಲಿ 12 ಮಹಿಳೆಯರೂ ಸೇರಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಬಿ.ವಿ. ಆಚಾರ್ಯ ಅವರು ಸಾಧಕರನ್ನು ಗುರುತಿಸಿ ಗೌರವಿಸುವ ಸರ್ಕಾರದ ಕ್ರಮವನ್ನು ಸ್ವಾಗತಿಸಿ, ಎಲ್ಲ ಪ್ರಶಸ್ತಿ ಪುರಸ್ಕೃತರ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ನಾಮಫಲಕಗಳಲ್ಲಿ ಕನಿಷ್ಠ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿದ್ದು, ನಿಯಮ ಪಾಲಿಸದ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನೊಂದೆಡೆ, ಪಾದಚಾರಿ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ತಣಿಸಂದ್ರ ಮುಖ್ಯರಸ್ತೆಯಲ್ಲಿ 11 ಕಿ.ಮೀ. ಉದ್ದದ ಕನ್ನಡ ರಾಜ್ಯೋತ್ಸವ ನಡಿಗೆ ಆಯೋಜಿಸಲಾಗಿತ್ತು.
‘ವಾಕಲೂರು ಸೇಫ್ 1,000 ಕಿ.ಮೀ. ಫುಟ್‌ಪಾತ್ ಚಾಲೆಂಜ್’ ಅಭಿಯಾನದ ಭಾಗವಾಗಿ ನಡೆದ ಈ ನಡಿಗೆಯಲ್ಲಿ ಪಾದಚಾರಿಗಳಿಗೆ ಎದುರಾಗುವ ಸಮಸ್ಯೆಗಳನ್ನು ಛಾಯಾಚಿತ್ರಗಳ ಮೂಲಕ ದಾಖಲಿಸಿ ಮಾಹಿತಿ ಸಂಗ್ರಹಿಸಲಾಯಿತು.
ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರೊಂದಿಗೆ ಕನ್ನಡದಲ್ಲಿಯೇ ಸಂವಹನ ನಡೆಸಲು ಆದ್ಯತೆ ನೀಡುವಂತೆ ಕರೆ ನೀಡಲಾಯಿತು. ಒಟ್ಟಿನಲ್ಲಿ, ಕನ್ನಡವನ್ನು ಕೇವಲ ಆಚರಣೆ
ಮತ್ತು ಅಭಿಮಾನದ ಭಾಷೆಯಾಗಿ ಉಳಿಸದೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ ಹಾಗೂ ಆಡಳಿತದ ಭಾಷೆಯನ್ನಾಗಿ ಬೆಳೆಸುವ ಅಗತ್ಯವನ್ನು ಈ ಸಮಾರಂಭ ಮತ್ತೊಮ್ಮೆ ಒತ್ತಿಹೇಳಿದೆ.
ಇದನ್ನು ಓದಿ : https://vijayatimes.com/nandini-curd-price-hike/