CM Siddaramaiah Announcement if Notices Given to Farmers as Waqf Property will be Taken Back.
Bengaluru: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ವಿಜಯಪುರ, ಯಾದಗಿರಿ ಹಾಗೂ ಧಾರವಾಡ (Vijayapura, Yadagiri and Dharwad) ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು. ಕಂದಾಯ ಸಚಿವರಾದ ಕೃಷ್ಣಬೈರೇಗೌಡ (Krishnabairegowda), ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ (M B Patil), ವಕ್ಫ್ ಸಚಿವರಾದ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರೈತರಿಗೆ ಸಮಸ್ಯೆ ಆಗಬಾರದು ಎಂಬ ನಮ್ಮ ನಿಲುವಿನಲ್ಲಿ ಯಾವ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ವಕ್ಫ್ ವಿವಾದದ ಕುರಿತು ಸ್ಪಷ್ಟನೆ ನೀಡಿರುವ ಸಚಿವ ಎಂ.ಬಿ. ಪಾಟೀಲ್ ಅವರು, ಕೇಂದ್ರದಲ್ಲಿ ವಕ್ಫ್ ಮಸೂದೆ ತರಲು ಬಿಜೆಪಿ (BJP) ಮುಂದಾಗಿದೆ. ಅದಕ್ಕೆ ಪೂರ್ವ ತಯಾರಿ ಇದಾಗಿದೆ. ಮಹಾರಾಷ್ಟ್ರ, ಜಾರ್ಖಂಡ್ನಲ್ಲಿ ವಿಧಾನಸಭಾ ಚುನಾವಣೆ ಹಾಗೂ ವಿವಿಧ ರಾಜ್ಯಗಳಲ್ಲಿ ಉಪ ಚುನಾವಣೆ ನಡೆಯುತ್ತಿರುವುದರಿಂದ ಬಿಜೆಪಿಯವರು ಇಂತಹ ವಾತಾವರಣ ಸೃಷ್ಟಿ ಮಾಡಲು ಯತ್ನಿಸುತ್ತಿದ್ದಾರೆ. 2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ (Waqf Board) ವಿಜಯಪುರದ ರೈತರಿಗೆ ನೀಡಿದ ನೋಟೀಸುಗಳಿವು! ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ? ವಿಜಯೇಂದ್ರರವರ ಸತ್ಯಶೋಧನಾ ಸಮಿತಿ (ಅತ್ತು-ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯಶೋಧನಾ ಸಮಿತಿ) ಅವರ ಸರ್ಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕಳುಹಿಸಿದ ನೋಟೀಸುಗಳಿಗೆ ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ.
Kannada Live-Waqf Board News In Kannada Latest Update
Bengaluru: CM Siddaramaiah has announced that no farmers will be evicted from their lands and if notices are given to farmers as waqf property in Vijayapura, Yadagiri and Dharwad districts, it will be taken back.
Speaking to the media, he said that no farmers will be evicted from their lands and if notices are given to farmers in Vijayapur, Yadgiri and Dharwad districts as waqf property, it will be taken back. Revenue Minister Krishnabairegowda, Vijaypur District In-charge Minister M B Patil, Wakf Minister Jameer Ahmed held a joint press conference yesterday and clarified this. He said that there is no change in our stand that there should not be any problem for the farmers.
On the other hand, Minister M.B. has clarified about the Waqf dispute. Patil said that the BJP has proposed to bring the Waqf Bill at the Centre. This is the preparation for it. BJP is trying to create such an atmosphere as assembly elections are going on in Maharashtra, Jharkhand and by-elections in various states. Operation Kamalada BJP ruled the state from 2019 to 2022 The notices given to the farmers of Vijayapur by the Waqf Board during the government period! How can the Hindu love that did not exist then have sprung up now on the basis of fabricated lies? Vijayendra’s Fact Finding Committee (Revised Fact-Finding Committee formed by Athu-Gogaredu) has challenged us to answer the notices sent to our farmers during his government.