ಕನ್ನಡಪರ ಸಂಘಟನೆಗಳಿಂದ ಸರಣಿ ಹೋರಾಟ

gallery

ಬೆಂಗಳೂರು, ನ. 20: ಮಸ್ಕಿ ಉಪಚುನಾವಣೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ  ಬಿ. ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಮುಂದಾಗಿತ್ತು. ಇದೀಗ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಸರಣಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ 1ಕ್ಕೆ ಸಿಎಂ ನಿವಾಸಕ್ಕೆ ಮುತ್ತಿಗೆಗೆ ಕರೆ ನೀಡಲಾಗಿದ್ದು, ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‌ಗೂ ಕರೆ ನೀಡಿದೆ.

ರಾಜ್ಯ ಸರ್ಕಾರ ಸ್ಥಾಪಿಸಲು ಮುಂದಾದ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಕನ್ನಡಪರ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ನವೆಂಬರ್ 30ರ ಒಳಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಆದೇಶವನ್ನು ಹಿಂಪಡೆಯದೇ ಇದ್ದರೇ, ಡಿಸೆಂಬರ್ 1ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ತಿಳಿಸಿವೆ. ಅಲ್ಲದೇ ಡಿಸೆಂಬರ್ 5ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ನಡೆಸುವುದಾಗಿಯೂ ಘೋಷಣೆ ಮಾಡಲಾಗಿದೆ. ಈ ಮೂಲಕ ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡಪರ ಸಂಘಟನೆಗಳು ಸರಣಿ ಹೋರಾಟ ಹಮ್ಮಿಕೊಂಡಿವೆ.

Exit mobile version