ಕರ್ನಾಟಕದಲ್ಲಿ ಸದ್ಯಕ್ಕಿಲ್ಲ ಲಾಕ್‌ ಡೌನ್

ಬೆಂಗಳೂರು ಅ 28 : ಕೋವಿಡ್ ನಿಂದ ಜನರು ಈಗಷ್ಟೆ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಕೊರೋನಾ ಸೋಂಕು ಹೆಚ್ಚಾಗುವುದನ್ನು ನೋಡಿದಾಗ ಮತ್ತೊಮ್ಮೆ ಲಾಕ್ ಡೌನ್ ಆಗಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹಬ್ಬಿದೆ. ಅಲ್ಲದೆ ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ಕಡೆಗಳಲ್ಲಿ ಈಗಾಗಲೇ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಇದೇ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೋವಿಡ್-19 ವೈರಸ್ ನಿಂದ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್ ಎವೈ 4.2 ಸೋಂಕಿಗೆ ಒಳಗಾಗಿರುವ ಎರಡು ಪ್ರಕರಣಗಳು ಪತ್ತೆಯಾದ ಕಾರಣ ಕರ್ನಾಟಕದಲ್ಲಿ ಅನೇಕರು ಭಯಭೀತರಾಗಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದು ಎಂಬ ವದಂತಿ ಎಲ್ಲೆಡೆ ಹರಡುತ್ತಿರುವುದನ್ನು ಗಮನಿಸಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮತ್ತೊಂದು ಲಾಕ್ ಡೌನ್ ಆಗಬಹುದು ಎಂಬ ವದಂತಿಗಳನ್ನು ತಳ್ಳಿ ಹಾಕಿದೆ

ಡೆಲ್ಟಾ ಪ್ಲಸ್ ಎವೈ 4.2 ರೂಪಾಂತರ ಸೋಂಕಿತರ ಪ್ರಕರಣಗಳ ಆವಿಷ್ಕಾರದಿಂದಾಗಿ ಕರ್ನಾಟಕದಲ್ಲಿ ಮತ್ತೊಂದು ಲಾಕ್ ಡೌನ್ ಮಾಡಬೇಕು ಎಂಬುವ ಟಿಎಸಿ ವರದಿಗಳು ಆಧಾರರಹಿತ ಮತ್ತು ಅವಾಸ್ತವಿಕವಾಗಿವೆ. ಕಳೆದ ಬಾರಿ ರಾಜ್ಯದಲ್ಲಿ ಪ್ರತಿದಿನ ಸುಮಾರು 50 ಸಾವಿರ ಕೋವಿಡ್ ಪ್ರಕರಣಗಳ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಲಾಕ್ ಡೌನ್ ಶಿಫಾರಸ್ಸು ಮಾಡಲಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯು 350ಕ್ಕಿಂತಲೂ ಕಡಿಮೆಯಾಗಿದೆ. ಲಾಕ್ ಡೌನ್ ಮಾಡುವ ಯಾವುದೇ ನಿರ್ಧಾರನ್ನು ಕೈಗೊಂಡಿಲ್ಲ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹೇಳಿದೆ.

Exit mobile version