ಬೆಂಗಳೂರು ಅ 31 : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನಡೆದ ಕಂಠೀರವ ಸ್ಟುಡಿಯೋ ಸುತ್ತ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದು, ಇನ್ನೂ ಐದಾರು ದಿನ ಕಂಠೀರವ ಸ್ಟುಡಿಯೋ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಇಂದು ನಿಗದಿಯಾಗಿದ್ದ ಪುನೀತ್ ಸಮಾಧಿಗೆ ಕುಟುಂಬಸ್ಥರು ಹಾಲು ತುಪ್ಪ ಬಿಡುವ ಕಾರ್ಯವನ್ನು ಐದನೇ ದಿನಕ್ಕೆ ಮುಂದೂಡಲಾಗಿದೆ. ಮಂಗಳವಾರ ಹಾಲು ತುಪ್ಪ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದ ಬಳಿಕ 144 ಸೆಕ್ಷನ್ ಹಿಂತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.