Visit Channel

ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್ : ಎಸ್‍ಪಿ ಬೆಂಬಲದೊಂದಿಗೆ ರಾಜ್ಯಸಭೆಗೆ ಸ್ಪರ್ಧೆ!

kapil sibal

ಕಾಂಗ್ರೆಸ್ ಪಕ್ಷಕ್ಕೆ(Congress Party) ಇದೀಗ ಮತ್ತೊಂದು ಹೊಡೆತ ಬಿದ್ದಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್(Kapil Sibal) ದಿಢೀರನೇ ಪಕ್ಷವನ್ನು ತೊರೆದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

Congress


ಇನ್ನು ಕಪಿಲ್ ಸಿಬಲ್ ಸಮಾಜವಾದಿ ಪಕ್ಷದ(Samajwadi Party) ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಇನ್ನು ಕಪಿಲ್ ಸಿಬಲ್ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್(Akhilesh Yadav) ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುತ್ತಿರುವ ವಿಡಿಯೋವನ್ನು ಎಎನ್‍ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ನಾಮಪತ್ರ ಸಲ್ಲಿಸಿದ ನಂತರ ಮಾದ್ಯಮಗಳೊಂದಿಗೆ ಮಾತನಾಡಿರುವ ಕಪಿಲ್ ಸಿಬಲ್, ನಾನು ಮೇ16ರಂದೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಇನ್ನು ಸ್ವತಂತ್ರ್ಯವಾಗಿ ರಾಜ್ಯಸಭೆಯಲ್ಲಿ ಧ್ವನಿಯೆತ್ತಲು ರಾಜ್ಯಸಭಾ ಚುನಾವಣೆಗೆ ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಕಣಕ್ಕಿಳಿದಿದ್ದೇನೆ ಎಂದಿದ್ದಾರೆ. ಇನ್ನು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ತೊರೆಯುತ್ತಿರುವರ ಸಂಖ್ಯೆ ಹೆಚ್ಚುತ್ತಿದೆ. ಗುಜರಾತ್ ಕಾಂಗ್ರೆಸ್‍ನ ಪ್ರಮುಕ ನಾಯಕನಾಗಿದ್ದ ಹಾರ್ದಿಕ್ ಪಟೇಲ್,

Kapil

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಜಾಖಡ್, ಕರ್ನಾಟಕದಲ್ಲಿ ಕರಾವಳಿಯ ಪ್ರಭಾವಿ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತ್ಯಜಿಸಿದ್ದಾರೆ.

Latest News

Dakshina Kannada
ರಾಜ್ಯ

ಎಚ್ಚರ! ಅಪಾಯದಲ್ಲಿದೆ ದ.ಕ ಜಿಲ್ಲೆಯ ಬಂಟ್ವಾಳ ಕಿಂಡಿ ಅಣೆಕಟ್ಟು ಸೇತುವೆ

ಕಿಂಡಿ ಅಣೆಕಟ್ಟು ಹಾಗೂ ಸೇತುವೆಯ ಕಾಮಗಾರಿಯ ಕರ್ಮಕಾಂಡ. ಕಾಮಗಾರಿ ಪೂರ್ಣ ಆಗುವ ಮೊದಲೇ ತಡೆಗೋಡೆಯ ಕಾಮಗಾರಿಯ ಅಡಿಪಾಯನೇ ಕಿತ್ತು ಹೊರಗೆ ಬಂದಿದೆ!

BJP
ರಾಜಕೀಯ

ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.

Malyalam
ಮನರಂಜನೆ

ನಟನೆಯಲ್ಲಿ ಸೋಲನ್ನು ಕಂಡರೂ ಕುಗ್ಗದೆ, ಇಂದು ಭಾರತ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ನಟ ಫಹಾದ್ ಫಾಸಿಲ್!

ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಎನಿಸಿದರೂ, ಇವರ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನೂ ಆಗಿರಲಿಲ್ಲ.

Kabbadi Player
ದೇಶ-ವಿದೇಶ

ಪಲ್ಟಿ ಹೊಡೆಯುವ ಯತ್ನದಲ್ಲಿ ಕುಸಿದು ಬಿದ್ದು ಕಬಡ್ಡಿ ಆಟಗಾರ ಸಾವು! ; ವೀಡಿಯೋ ವೈರಲ್

ಕಬಡ್ಡಿ(Kabbadi) ಆಟಗಾರರೊಬ್ಬ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ(Hospital) ಮೃತಪಟ್ಟಿದ್ದಾರೆ.