ಮಕ್ಕಳ ಮಾರಾಟ ಪ್ರಕರಣ: ವಿಚಾರಣೆ ವೇಳೆ ಬಯಲಾಯ್ತು 250ಕ್ಕೂ ಹೆಚ್ಚು ಮಕ್ಕಳ ಮಾರಾಟ

Bengaluru: ಕುಡುಕ‌ನೊಬ್ಬ ನೀಡಿದ ಸುಳಿವಿನ ಮೇರೆಗೆ ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ (CCB) ಪೊಲೀಸರು, ಎಳೆ (Kar Child Sale Case) ಕಂದಮ್ಮಗಳ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು

ರೆಡ್​ಹ್ಯಾಂಡ್ (Red Hand) ಆಗಿ ಹಿಡಿದಿದ್ದರು. ಈ ಪ್ರಕರಣದಲ್ಲಿ ವೈದ್ಯರು, ಸರ್ಕಾರಿ ಅಧಿಕಾರಿಗಳವರೆಗೂ ಲಿಂಕ್ ಇರುವುದು ಪತ್ತೆಯಾಗಿದ್ದು, ಇದೀಗ, ಆರೋಪಿಗಳು 250ಕ್ಕೂ ಹೆಚ್ಚು ಮಕ್ಕಳನ್ನು

ಮಾರಾಟ ಮಾಡಿದ (Kar Child Sale Case) ವಿಚಾರ ಬೆಳಕಿಗೆ ಬಂದಿದೆ.

ಮಾರಾಟ ಮಾಡಿದ ಮಕ್ಕಳ ಪೈಕಿ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿಗೆ (Tamilnadu) ಮಾರಾಟ ಮಾಡಿರುವುದು ತಿಳಿದುಬಂದಿದ್ದು,

ಹಸುಗೂಸು ಮಾರಾಟ ಪ್ರಕರಣ ಸಂಬಂಧ ಬಂಧಿತ ಎಂಟು ಆರೋಪಿಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಅದರಂತೆ, ಆರೋಪಿಗಳು ಕಳೆದ 6 ವರ್ಷಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ ವಿಚಾರವನ್ನು ಬಾಯಿಬಿಟ್ಟಿದ್ದಾರೆ. ಈ ಪೈಕಿ ಕೇವಲ 50-60 ಮಕ್ಕಳನ್ನು ಕರ್ನಾಟಕದಲ್ಲಿ

(Karnataka) ಮಾರಾಟ ಮಾಡಿದರೆ ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ‌ ಮಾಡಿದ್ದಾರೆ. ಆರೋಪಿಗಳು ಈ ವಿಚಾರವನ್ನು ಬಾಯಿಬಿಡುತ್ತಿದ್ದಂತೆ ಮತ್ತಷ್ಟು ಕಾರ್ಯಪ್ರವೃತ್ತರಾದ

ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಮಾರಾಟ ಆಗಿರುವ ಮಕ್ಕಳ ಬಗ್ಗೆ ಆರೋಪಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.

ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಲಾಗಿದೆ ಎಂದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಈ ಪ್ರಕರಣವನ್ನು ಭೇದಿಸಲು ಸಿಸಿಬಿ

ಅಧಿಕಾರಿಗಳು ಮಕ್ಕಳು ಕೊಳ್ಳುವ ಪೋಷಕರ ಸೋಗಿನಲ್ಲಿ ಥೇಟ್ ಫೀಲ್ಮ್ ಸ್ಟೈಲ್​ನಲ್ಲಿ (Film Style) ಎಂಟ್ರಿ ಕೊಟ್ಟು ಆರೋಪಿಗಳನ್ನು ಸೆರೆ ಹಿಡಿದಿದ್ದರು.

ಕುಡುಕ‌ನೋರ್ವ ನೀಡಿದ್ದ ಮಹತ್ವದ ಸುಳಿವು ಆಧರಿಸಿ ಬೇಟೆಗಿಳಿದಿದ್ದ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ಈ ವೇಳೆ ವೈದ್ಯರಿಂದ ಹಿಡಿದು ಸರ್ಕಾರಿ

ಅಧಿಕಾರಿಗಳವರೆಗೂ ಪ್ರಕರಣದಲ್ಲಿ ಲಿಂಕ್ ಇರುವುದು ಪತ್ತೆಯಾಗಿದೆ. ಈ ಬೃಹತ್ ಜಾಲದಲ್ಲಿ ವೈದ್ಯರೇ (Doctor) ಕಿಂಗ್ ಪಿನ್​ಗಳಾಗಿದ್ದಾರೆ.

ಮಕ್ಕಳ ಮಾರಾಟವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಸರ್ಕಾರಿ ಅಧಿಕಾರಿ ಕೂಡ ಮಿಂಗಲಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು,

ಮಾರಾಟವಾಗುವ ಮಕ್ಕಳ ನಕಲಿ ದಾಖಲೆ ಸೃಷ್ಟಿಸಿ ಕರಾಳ ದಂಧೆ ನಡೆಯುತ್ತಿರುವ ಬಗ್ಗೆ ಒಂದೊಂದೇ ಮುಖ ಅನಾವರಣಗೊಳ್ಳುತ್ತಿದೆ. ಸದ್ಯ ಹಲವು ಆಯಾಮಗಳಲ್ಲಿ ಸಿಸಿಬಿ ತನಿಖೆ ಚುರುಕುಗೊಳಿಸಿದೆ.

ಇದನ್ನು ಓದಿ: ಹೈಕೋರ್ಟ್ ರಿಲೀಫ್: ನಾನು ತಪ್ಪು ಮಾಡಿಲ್ಲ ಎಂದ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರು ಏನಂದ್ರು?

Exit mobile version