ಕರ್ನಾಟಕ (Karnataka) ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಫಾರೆಸ್ಟ್ ವಾಚರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು 310 ಫಾರೆಸ್ಟ್ ವಾಚರ್ (Forest Watcher) ಹುದ್ದೆಗಳು ಖಾಲಿ ಇದ್ದು, ಅರ್ಜಿಸಲ್ಲಿಸಲು ಬೇಕಾದ ಅರ್ಹತೆ, ವಿದ್ಯಾಭ್ಯಾಸ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ಹೆಸರು: ಫಾರೆಸ್ಟ್ ವಾಚರ್
ಒಟ್ಟು ಹುದ್ದೆಗಳು: 310
ವಿದ್ಯಾರ್ಹತೆ: ಅಭ್ಯರ್ಥಿಯು 10ನೇ ತರಗತಿ ಪೂರ್ಣಗೊಳಿಸಿರಬೇಕು. ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ.
ವೇತನ: 21,400-42,000
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಶುಲ್ಕ: ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ –125 ರೂಪಾಯಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 45 ರೂಪಾಯಿ ನಿಗದಿ ಪಡಿಸಲಾಗಿದೆ
ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ –5 ವರ್ಷ ಸಡಿಲಿಕೆ, ಪ್ರವರ್ಗ 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ಸಂದರ್ಶನ
ಮೆಡಿಕಲ್ ಟೆಸ್ಟ್ (Medical Test) ಮತ್ತು ಫಿಸಿಕಲ್ ಡೆಸ್ಟ್
ಪ್ರಮುಖ ದಿನಾಂಕಗಳು:
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 27/09/2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 26/10/2023
ಹೆಚ್ಚಿನ ಮಾಹಿತಿಗಾಗಿ : https://aranya.gov.in/aranyacms/(S(fhtio4v5thqdlj2h5yngejok))/English/Home.aspx