Bengaluru: ವಿವಾಹವಾಗಿದ್ದರೂ ಮತ್ತೊಬ್ಬರ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡು (kar hc order- divorced case) ಜೀವನ ನಡೆಸುತ್ತಿರುವ ಮಹಿಳೆ ವಿಚ್ಛೇದನ ಬಳಿಕ ಗಂಡ, ಹೆಂಡತಿಗೆ ನೀಡುವ
ಜೀವನಾಂಶದ ಕುರಿತು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ತೀರ್ಪನ್ನು ನೀಡಿದೆ.
ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಮಹಿಳೆಯೊಬ್ಬರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಕ್ರಿಮಿನಲ್ (Criminal) ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರಾಜೇಂದ್ರ ಬಾದಾಮಿಕರ್
(Rajendra Badamikar) ಅವರಿದ್ದ ಏಕಸದಸ್ಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ. ನಿಷ್ಠಾವಂತರಿಲ್ಲದಿದ್ದಾಗ ಪತಿಯಿಂದ ಜೀವನಾಂಶ ನಿರೀಕ್ಷೆ ಮಾಡಬಾರದು. ನ್ಯಾಯ
ಪೀಠವು ಅರ್ಜಿದಾರರ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಹಾಗೂ ಪ್ರಾಮಾಣಿಕರಿಲ್ಲದಿದ್ದಾಗ ಪತಿಯಿಂದ ಜೀವನಾಂಶ ನೀಡಬೇಕೆಂಬ ವಾದ ಒಪ್ಪಿಕೊಳ್ಳಲಾಗುವುದಿಲ್ಲ ಮತ್ತು ಪತಿ ಕಡೆಯಿಂದ
ಯಾವುದೇ ನಿರೀಕ್ಷೆ ಮಾಡಬಾರದು ಎಂದು (kar hc order- divorced case) ಆದೇಶ ಹೊರಡಿಸಿದೆ.
ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ
ಅರ್ಜಿದಾರರು ಇನ್ನೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿರುವ ದೂರು ದಾಖಲಾಗಿದ್ದು, ತನಿಖೆ ವೇಳೆ ಆಪ್ತನೊಂದಿಗೆ ನೆಲೆಸಲು ಇಚ್ಛಿಸುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಇದೇ ಆಧಾರದ ಮೇಲೆ
ವಿಚ್ಛೇದನವೂ ಮಂಜೂರಾಗಿದ್ದು, ಅರ್ಜಿದಾರರನ್ನು ಪಾಟಿ ಸವಾಲಿಗೆ ಒಳಪಡಿಸಿದಾಗ ಜೀವನ ನಡೆಸುವುದಕ್ಕಾಗಿ ಯಾವುದೇ ಆದಾಯದ ಮೂಲಗಳಿಲ್ಲವೆಂದು ತಿಳಿಸಿದ್ದಾರೆ.
ಸಾಕ್ಷಿಗಳ ಪ್ರಕಾರ ಮತ್ತೊಬ್ಬ ವ್ಯಕ್ತಿಯೊಂದಿಗೆ ನೆಲೆಸಿದ್ದು, ಅವರೇ ಜೀವನ ನೋಡಿಕೊಳ್ಳುತ್ತಿದ್ದಾರೆ. ಆ ವ್ಯಕ್ತಿಯೊಂದಿಗೆ ಎಲ್ಲ ಸಂದರ್ಭಗಳಲ್ಲಿಯೂ ಇರುತ್ತಿರುವ ಅಂಶ ಸಾಕ್ಷ್ಯಾಧಾರಗಳಿಂದ ತಿಳಿದು ಬಂದಿದ್ದು,
ಆದ ಕಾರಣ ಅರ್ಜಿದಾರರಿಗೆ ಪರಿಹಾರ ನೀಡಲಾಗದು ಎಂದು ಪೀಠ ತಿಳಿಸಿದೆ.
ಇದನ್ನು ಓದಿ : ಪ್ಯಾಲೆಸ್ಟೀನ್ ಹಮಾಸ್ ಉಗ್ರರಿಂದ ಇಸ್ರೇಲ್ ಮೇಲೆ 5000 ರಾಕೆಟ್ ದಾಳಿ: ಯುದ್ಧದ ಸ್ಥಿತಿ ಘೋಷಿಸಿದ ಇಸ್ರೇಲ್
- ಭವ್ಯಶ್ರೀ ಆರ್.ಜೆ