Bengaluru: ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ (Kar Protest Against Central Govt) ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ
ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ಶಬರಿಯಂತೆ ತಾಳ್ಮೆಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ (Budget)ನಲ್ಲಿ ಹೇಳಿದಂತೆ
ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ
(February) 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ. ಎಲ್ಲರೂ ಕೈಜೋಡಿಸಿ ಕನ್ನಡಿಗರಿಗೆ ನ್ಯಾಯ
ಒದಗಿಸುವ ಕೆಲಸ ಮಾಡಬೇಕಿದೆ ಎದ್ನು ಹೇಳಿದ್ದಾರೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದು ಟಾಂಗ್ ನೀಡಿದ್ದಾರೆ.
ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ
ಹಣವೂ ಬಂದಿಲ್ಲ. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಕೇಂದ್ರ ಸರ್ಕಾರದ
ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರಗಾಲದ ಸಮಯದಲ್ಲಿ ತೋರಿರುವ ಮಲತಾಯಿ ಧೋರಣೆಯನ್ನು ವಿರೋಧಿಸಿ ಪ್ರತಿಭಟನೆ
ಹಮ್ಮಿಕೊಳ್ಳಲಾಗಿದೆ (Kar Protest Against Central Govt) ಎಂದು ಸಿಎಂ ಹೇಳಿದ್ದಾರೆ.
GST ಜಾರಿಗೆ ಬಂದಾಗ ಇದು ಅವೈಜ್ಞಾನಿಕ ಎಂದು ನಾವು ಸಾರಿ ಸಾರಿ ಹೇಳಿದೆವು. ಆಗ ರಾಜ್ಯದ ತೆರಿಗೆ ಬೆಳವಣಿಗೆ ದರ 15% ಇತ್ತು. ಇದರಿಂದ ತೆರಿಗೆ, ಕೇಂದ್ರದ ಅನುದಾನವೂ
ಹೆಚ್ಚಾಗತ್ತೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು. ಈ ಪರಿಹಾರ ಜೂನ್ 2022 ಕ್ಕೆ ನಿಲ್ಲಿಸಿದ್ದಾರೆ.
ಈಗ ಪರಿಹಾರ ಕೊಡ್ತಾ ಇಲ್ಲ. 5 ವರ್ಷಗಳ ಕಾಲ ಮಾತ್ರ ಪರಿಹಾರ ಕೊಟ್ಟರು. ಇದರಿಂದಾಗಿ ಈಗ ನಮ್ಮ ತೆರಿಗೆ ಬೆಳವಣಿಗೆ 15% ಗೆ ಮತ್ತೆ ತಲುಪಲು ಆಗಲೇ ಇಲ್ಲ.
ಹೀಗಾಗಿ ಪರಿಹಾರ ಮುಂದುವರೆಸಿ ಎಂದು ಕೇಳಿದೆವು. ಇವತ್ತಿನವರೆಗೂ ಮುಂದುವರೆಸುವ ಬಗ್ಗೆ ತೀರ್ಮಾನವನ್ನೇ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ
ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಕ್ಷದ ನಾಯಕರಿಗೆ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ (H D Devegowda), ರಾಜ್ಯಸಭೆ ಸದಸ್ಯ
ವೀರೇಂದ್ರ ಹೆಗ್ಗಡೆ, ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ (Nirmala Sitaraman), ಪ್ರಹ್ಲಾದ್ ಜೋಶಿ ಸೇರಿದಂತೆ ಕಾಂಗ್ರೆಸ್ನ (Congress) ಸಂಸದರಿಗೂ ಕೂಡ ಸಿದ್ದರಾಮಯ್ಯ
ಪತ್ರ ಬರೆದಿದ್ದಾರೆ.