ಲೋಕಸಮರ 2024: ‘ಕೈ’ ಸೇರಿದ ಕರಡಿ, ‘ಕಮಲ’ ಮುಡಿದ ಅಖಂಡ!

Bengaluru: ಲೋಕಸಭಾ ಚನಾವಣೆ (Loksabha Election) ಹೊತ್ತಲ್ಲೇ ಪಕ್ಷಾಂತರ (Karadi Sanganna Joins Congress) ಪರ್ವ ಜೋರಾಗಿದ್ದು, ಮೂರು ಪಕ್ಷಗಳು ತಮ್ಮ ಬಲ ಹೆಚ್ಚಿಸಿಕೊಳ್ಳಲು

ಅನೇಕ ನಾಯಕರನ್ನು ತಮ್ಮತ್ತ ಸೆಳೆಯುತ್ತಿವೆ. ಲೋಕಸಭಾ ಚುನಾವಣೆ ಟಿಕೆಟ್ ಘೋಷಣೆಯಾದ ನಂತರ ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಕರಡಿ ಸಂಗಣ್ಣ ಇದೀಗ ಬಿಜೆಪಿ ತೊರೆದು,

ಕಾಂಗ್ರೆಸ್ (Congress) ಸೇರ್ಪಡೆಯಾಗಿದ್ದಾರೆ. ಇನ್ನೊಂದೆಡೆ ಬೆಂಗಳೂರಿನ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ (Srinivasmurthy) ಕಾಂಗ್ರೆಸ್

ತೊರೆದು, ಬಿಜೆಪಿ (Karadi Sanganna Joins Congress) ಸೇರ್ಪಡೆಯಾಗಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಕರಡಿ ಸಂಗಣ್ಣ ಬಯಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಬದಲಾಗಿ ಅವರ

ಹಿರಿಯ ಸೊಸೆ ಮಂಜುಳಾ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಚುನಾವಣೆಯಲ್ಲಿ ಮಂಜುಳಾ ಅವರು ಸೋಲುಂಡಿದ್ದರು. ಇನ್ನು ಲೋಕಸಭಾ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದ ಕರಡಿ ಸಂಗಣ್ಣ (Karadi Sanganna)

ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿತ್ತು.

ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಖ್ಯಾತ ವೈದ್ಯ ಬಸವರಾಜ್ ಎಸ್ ಕ್ಯಾವಟೂರ್ (Basavaraj S Kyavatur) ಅವರಿಗೆ ನೀಡಿತ್ತು. ಇದರಿಂದ ಅಸಮಾಧಾನಗೊಂಡಿರುವ ಸಂಗಣ್ಣ ಅವರು ಇದೀಗ

ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಕುರಿತು ಮಾತನಾಡಿರುವ ಅವರು, ನಾನು ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ. ಕೊಪ್ಪಳ ಜಿಲ್ಲೆಯ ಅಭಿವೃದ್ದಿ ಹಾಗೂ ಕಾಂಗ್ರೆಸ್

ಪಕ್ಷದ ಸಿದ್ದಾಂತವನ್ನು ಮೆಚ್ಚಿಕೊಂಡು ಬಂದಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ನಾನು ಶ್ರಮಿಸುತ್ತೇನೆ ಎಂದಿದ್ದಾರೆ.

ಇನ್ನು 2018ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದಿಂದ ಸುಮಾರು 80 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದು ಬೀಗಿದ್ದ ಅಖಂಡ ಶ್ರೀನಿವಾಸಮೂರ್ತಿಗೆ ಕಳೆದ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನಿರಾಕರಿಸಲಾಗಿತ್ತು. ಡಿಜೆ ಹಳ್ಳಿ, (DJ Halli) ಕೆಜೆ ಹಳ್ಳಿ ಗಲಭೆಯ ನಂತರ ಸಾಕಷ್ಟು ಹೈಡ್ರಾಮಾ ನಡೆದ ಕಾರಣ, ಅಖಂಡ ಶ್ರೀನಿವಾಸಮೂರ್ತಿಗೆ ಮರಳಿ

ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್ನೊಳಗೆ ವಿರೋಧ ಕೇಳಿ ಬಂದಿತ್ತು.

ಹೀಗಾಗಿ ಅಖಂಡ ಶ್ರೀನಿವಾಸಮೂರ್ತಿಗೆ (Srinivas Murthy) ಟಿಕೆಟ್ ನೀಡಿರಲಿಲ್ಲ. ಆದರೆ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಿ, ಸೋಲುಂಡಿದ್ದರು. ಇದೀಗ ಬಿ.ಎಸ್.ಯಡಿಯೂರಪ್ಪ

(B S Yediyurappa) ನವರ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ.

ಇದನ್ನು ಓದಿ: ಚೊಂಬು ನೀಡಿರುವ ಕೇಂದ್ರ ಸರ್ಕಾರಕ್ಕೆ ಕನ್ನಡಿಗರೂ ಚೊಂಬು ನೀಡಬೇಕು : ಕಾಂಗ್ರೆಸ್ ನಿಂದ ವ್ಯಂಗ್ಯಭರಿತ ಜಾಹೀರಾತು ಪ್ರಕಟ

Exit mobile version