• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರವೇ ಕಾರ್ಯಕರ್ತರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಪದೋನ್ನತಿ ಪರೀಕ್ಷೆ ದಿಢೀರ್​​ ‌ಮುಂದೂಡಿಕೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಕರವೇ ಕಾರ್ಯಕರ್ತರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಪದೋನ್ನತಿ ಪರೀಕ್ಷೆ ದಿಢೀರ್​​ ‌ಮುಂದೂಡಿಕೆ
0
SHARES
9
VIEWS
Share on FacebookShare on Twitter

ಭಾಷಾ ಅನ್ಯಾಯದ ವಿರುದ್ಧ ಸಿಡಿಸಿದ್ದ (Karave activists demand exam in Kannada) ಕರವೇ ಕಾರ್ಯಕರ್ತರು

ಕನ್ನಡದಲ್ಲಿ ಪರೀಕ್ಷೆ ನಡೆಸಲು ಒತ್ತಾಯಿಸಿದ ಕರವೇ ಕಾರ್ಯಕರ್ತರು

ಪ್ರತಿಭಟನೆ ತೀವ್ರಗೊಂಡಂತೆ ಪರೀಕ್ಷೆ ಮುಂದೂಡಿದ ನೈರುತ್ಯ ರೈಲ್ವೆ ಇಲಾಖೆ

Hubli : ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪದ ನಡುವೆ ಕನ್ನಡ ಪರ ಸಂಘಟನೆಗಳ (Karave activists demand exam in Kannada) ತೀವ್ರ ಪ್ರತಿಭಟನೆಗೆ ಮಣಿದ ನೈರುತ್ಯ ರೈಲ್ವೆ ಇಲಾಖೆ, ಇಂದು ನಡೆಯಬೇಕಿದ್ದ ಪದೋನ್ನತಿ ಪರೀಕ್ಷೆಯನ್ನು ದಿಢೀರ್ ಮುಂದೂಡಿರುವ ಘಟನೆ ಬೆಳಕಿಗೆ ಬಂದಿದೆ.

ನೂರಾರು ಉದ್ಯೋಗಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಪರೀಕ್ಷೆ ಏಕಾಏಕಿ ಮುಂದೂಡಲ್ಪಟ್ಟಿದ್ದು, ಪರೀಕ್ಷೆಗೆ ಸಿದ್ಧರಾಗಿದ್ದ ಅಭ್ಯರ್ಥಿಗಳಿಗೆ ನಿರಾಸೆ ಉಂಟಾಗಿದೆ. ರೈಲ್ವೆ ಇಲಾಖೆಯ ಈ ತೀರ್ಮಾನವು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

Karave activists demand exam in Kannada

ನೈರುತ್ಯ ರೈಲ್ವೆಯ ಗೂಡ್ಸ್ ರೈಲು ಮ್ಯಾನೇಜರ್ ಹಾಗೂ ಎಲ್‌ಡಿಸಿಇ ಹುದ್ದೆಗಳಿಗಾಗಿ (Karave activists demand exam in Kannada) ನಡೆಯಬೇಕಿದ್ದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಇಂದೇ ಎರಡು ಗಂಟೆಗಳ ಕಾಲ ನಡೆಯಬೇಕಿತ್ತು.

ಆದರೆ, ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲವೆಂಬ ಕಾರಣಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಪರೀಕ್ಷಾ ಕೇಂದ್ರಗಳ ಮುಂದೆ ಪ್ರತಿಭಟನೆ ನಡೆಸಿ, ತಕ್ಷಣ ಪರೀಕ್ಷೆಯನ್ನು ರದ್ದುಪಡಿಸುವಂತೆ ಆಗ್ರಹಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣಗೌಡ ಬಣದ ಕಾರ್ಯಕರ್ತರು ಹುಬ್ಬಳ್ಳಿಯ ಕೇಶ್ವಾಪುರ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕನ್ನಡದಲ್ಲಿ ಪರೀಕ್ಷೆ ನಡೆಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು, ರೈಲ್ವೆ ಇಲಾಖೆ ನಿರಂತರವಾಗಿ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ರೈಲ್ವೆ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡರು.

ಈ ಹೋರಾಟದ ಪರಿಣಾಮವಾಗಿ, ರೈಲ್ವೆ ಇಲಾಖೆ ಪರೀಕ್ಷೆಯನ್ನು ಮುಂದೂಡಿರುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಪರೀಕ್ಷೆಗೆ ಆಗಮಿಸಿದ್ದ ಅಭ್ಯರ್ಥಿಗಳನ್ನು ವಾಪಸ್ ಕಳುಹಿಸಲಾಗಿದ್ದು, ಮುಂದಿನ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಲಾಗಿದೆ.

ಕನ್ನಡದಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಅಂತಿಮ ನಿರ್ಧಾರವನ್ನು ಮೇಲಾಧಿಕಾರಿಗಳು ತೆಗೆದುಕೊಳ್ಳುತ್ತಾರೆ ಎಂದು ರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದರ ಮೊದಲು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು, ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವ ಕ್ರಮವನ್ನು ಖಂಡಿಸಿ ತೀವ್ರ ಹೋರಾಟಕ್ಕೆ ಕರೆ ನೀಡಿದ್ದರು. ಕನ್ನಡಿಗರ ಹಕ್ಕುಗಳನ್ನು ಕಡೆಗಣಿಸುವ ಯಾವುದೇ ಕ್ರಮವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದರು.

ಈ ಹಿನ್ನೆಲೆ ನಡೆದ ಪ್ರತಿಭಟನೆಗೆ ಸ್ಪಂದಿಸಿದ ರೈಲ್ವೆ ಇಲಾಖೆ ಪರೀಕ್ಷೆಯನ್ನು ಮುಂದೂಡುವ ಮೂಲಕ ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ.ಆದರೆ, ಮುಂದಿನ ದಿನಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸುವುದೇ ಎಂಬ ಪ್ರಶ್ನೆ ಇನ್ನೂ ಉತ್ತರಿಸಬೇಕಿದೆ.

ಇದನ್ನು ಓದಿ : https://vijayatimes.com/sslc-exam-begins-tomorrow/

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.