ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆ ವಿರುದ್ಧದ ಹೋರಾಟಕ್ಕೆ ಕರವೇ ಬೆಂಬಲ: ಟಿ.ಎ. ನಾರಾಯಣಗೌಡ

ಬೆಂಗಳೂರು, ಜೂ. 04: ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯು ಸ್ಥಳೀಯರಿಗೆ ವಂಚಿಸಿ ಉತ್ತರ ಭಾರತೀಯರಿಗೆ ಉದ್ಯೋಗ ನೀಡಿರುವ ಹಿನ್ನೆಲೆಯಲ್ಲಿ ಕರಾವಳಿಯ ಜನಪರ ಸಂಘಟನೆಗಳು ಜೂ.5ಕ್ಕೆ‌ ಕರೆ ನೀಡಿರುವ ಮನೆ ಮನೆ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿಸುತ್ತದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದರು.

ಎಂಆರ್ ಪಿಎಲ್ ಸಂಸ್ಥೆ 233 ಹುದ್ದೆಗಳಿಗೆ ಉತ್ತರ ಪ್ರದೇಶ, ಬಿಹಾರ ಮತ್ತಿತರ ರಾಜ್ಯಗಳ‌ ಜನರನ್ನೇ ತುಂಬಿಕೊಂಡಿದೆ. ಎಂಆರ್ ಪಿಎಲ್ ಗೆ ಭೂಮಿ ಕೊಟ್ಟ ಜನರಿಗೇ ಉದ್ಯೋಗ ನೀಡದಿದ್ದರೆ ಇಂಥ ಉದ್ಯಮಗಳು ನಮಗೆ ಬೇಕಾಗಿಲ್ಲ. ಸ್ಥಳೀಯರಿಗೆ ಉದ್ಯೋಗ ದೊರೆಯಬೇಕಿರುವುದು ಸಹಜ ನ್ಯಾಯ.

ಡಾ. ಸರೋಜಿನಿ ಮಹಿಷಿ ವರದಿ ಇಂದಿಗೂ ಜಾರಿಯಾಗಿಲ್ಲ. ರಾಜ್ಯ ಸರ್ಕಾರ ಪರಿಷ್ಕೃತ ಆದೇಶವನ್ನೂ‌ ಹೊರಡಿಸಿತು, ಅದೂ ಕೂಡ ಪಾಲನೆ ಆಗುತ್ತಿಲ್ಲ. ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳೇ ಹೀಗೆ ಸ್ಥಳೀಯರಿಗೆ ವಂಚಿಸಿದರೆ ಜನರು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.

ಮಣ್ಣಿನ ಮಕ್ಕಳಿಗೆ ಉದ್ಯೋಗ ಒದಗಿಸದ ಎಂಆರ್‌ಪಿಎಲ್‌ ವಿಸ್ತರಣೆಗಾಗಿ ಬೇಡಿಕೆ ಇಟ್ಟಿರುವ ಒಂದಿಂಚು ಜಾಗವನ್ನೂ‌ ಕೊಡಕೂಡದು. ಎಂಆರ್ ಪಿಎಲ್ ನಲ್ಲಿ ಸ್ಥಳೀಯರಿಗೆ ಸಿಂಹಪಾಲು ಇರಬೇಕು. ಉಳಿದ ಹುದ್ದೆಗಳು ಕರ್ನಾಟಕದ ಇತರ ಜಿಲ್ಲೆಗಳಿಗೆ ಲಭ್ಯವಾಗಬೇಕು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.