ಅಂತಿಮ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌; ಸಾಮಾನ್ಯ ಕಾರ್ಯಕರ್ತರಿಗೆ ಶಿವಮೊಗ್ಗ ಟಿಕೆಟ್‌ ನೀಡಿದ ಬಿಜೆಪಿ

Bangalore : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka assembly election) ಕಾಂಗ್ರೆಸ್ (Congress) ತನ್ನ ಐವರು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಇಂದು ಮುಂಜಾನೆ ಬಿಡುಗಡೆ ಮಾಡಿದೆ. ಈ ಮೂಲಕ ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು (Karnataka assembly election list) ಹೊರತುಪಡಿಸಿ 223 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಮೇಲುಕೋಟೆಯಲ್ಲಿ ಸರ್ವೋದಯ ಪಕ್ಷದ ದರ್ಶನ್‌ ಪುಟ್ಟಣ್ಣಯ್ಯಗೆ ಕಾಂಗ್ರೆಸ್‌ ಬೆಂಬಲ ವ್ಯಕ್ತಪಡಿಸಿದೆ. ಇನ್ನು ಕಾಂಗ್ರೆಸ್‌ನ ಅಂತಿಮ ಪಟ್ಟಿಯಲ್ಲಿ ರಾಯಚೂರಿನಿಂದ (Rayachur) ಮಹಮ್ಮದ್ ಶಾಲೇಂ,

ಸಿಡ್ಲಘಟ್ಟದಿಂದ ಬಿವಿ ರಾಜೀವ್ ಗೌಡ, ಸಿವಿ ರಾಮನ್ ನಗರದಿಂದ ಎಸ್ ಆನಂದ್ ಕುಮಾರ್, ಅರಕಲಗೂಡಿನಿಂದ ಎಚ್ ಪಿ ಶ್ರೀಧರ್ ಗೌಡ, ಮಂಗಳೂರು ನಗರ ಉತ್ತರದಿಂದ ಇನಾಯತ್ ಅಲಿ ಕಣಕ್ಕಿಳಿದಿದ್ದಾರೆ.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraja Bommai) ವಿರುದ್ದ ಶಿಗ್ಗಾಂವ್

ಕ್ಷೇತ್ರದಿಂದ ಮೊಹಮ್ಮದ್ ಯೂಸುಫ್ (Karnataka assembly election list) ಸವಣೂರ ಟಿಕೆಟ್‌ ನೀಡಲಾಗಿತ್ತು.

ಇದೀಗ ಅಭ್ಯರ್ಥಿ ಬದಲಾವಣೆ ಮಾಡಲಾಗಿದ್ದು, ಅಲ್ಲಿಂದ ಯಾಸಿರ್ ಅಹಮದ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿದೆ. ಬೊಮ್ಮಾಯಿ

ಅವರು 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಸೈಯದ್ ಅಜೀಂಪೀರ್ ಖಾದ್ರಿ ಅವರನ್ನು ಸೋಲಿಸಿದ್ದರು.

ಇದನ್ನೂ ಓದಿ : https://vijayatimes.com/jp-nadda-statement/

ಇನ್ನೊಂದೆಡೆ ಶಿವಮೊಗ್ಗದಲ್ಲಿ ಬಿಜೆಪಿ (BJP) ಪಕ್ಷವು ಚನ್ನಬಸಪ್ಪಗೆ ಟಿಕೆಟ್ ನೀಡಿದ್ದು, ಹಾಲಿ ಶಾಸಕ ಹಾಗೂ

ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಕುಟುಂಬಕ್ಕೆ ಟಿಕೆಟ್ ನಿರಾಕರಿಸಿದೆ.

ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ತಮ್ಮ ಇಚ್ಛೆಯನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ಇತ್ತೀಚೆಗೆ ತಿಳಿಸಿದ್ದರು.

ಶಿವಮೊಗ್ಗದಿಂದ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಣಕ್ಕಿಳಿಸುವ ಬಗ್ಗೆ ಯೋಚಿಸಬೇಡಿ ಎಂದು ಮನವಿ ಮಾಡಿದ್ದರು.

ತಮ್ಮ ಪುತ್ರ ಕಾಂತೇಶ್‌ಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು ಆದರೆ ಅಂತಿಮವಾಗಿ ಈಶ್ವರಪ್ಪನವರ ಆಪ್ತ ಚೆನ್ನಬಸಪ್ಪಗೆ ಶಿವಮೊಗ್ಗ ಟಿಕೆಟ್‌ ದೊರೆತಿದೆ.

ಶಿವಮೊಗ್ಗದಿಂದ (Shivamogga) ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಜೆಪಿಯ ಹಿರಿಯ ಮುಖಂಡ ಹಾಗೂ ಎಂಎಲ್‌ಸಿ ಆಯನೂರು ಮಂಜುನಾಥ್‌ ಬಿಜೆಪಿ ತೊರೆದು ಜೆಡಿಎಸ್‌ (JDS) ಸೇರಿದ್ದು,

ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು (ಏಪ್ರಿಲ್ 20) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Exit mobile version