Bangalore : ಕರ್ನಾಟಕ ವಿಧಾನಸಭಾ ಚುನಾವಣೆಗೆ (Assembly election) ದಿನಗಣನೇ ಶುರುವಾಗಿದೆ. ಮೂರು ಪಕ್ಷಗಳು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಜೆಡಿಎಸ್ (JDS) 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು, 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Karnataka assembly election2023) ಕಾಂಗ್ರೆಸ್ಬಿಡುಗಡೆ ಮಾಡಿದೆ.
ಆದರೆ ಬಿಜೆಪಿ (BJP) ಇನ್ನು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈ ಮಧ್ಯೆ ಎರಡನೇಯ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿರುವ ಕಾಂಗ್ರೆಸ್ಗೆ 63 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳಿಲ್ಲದಿರುವುದು ದೊಡ್ಡ ತಲೆನೋವು ತಂದಿದೆ.
ಮೂಲಗಳ ಪ್ರಕಾರ, ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರಿನಿಂಗ್ ಕಮಿಟಿ ಒಟ್ಟು 37 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ.
ಆದರೆ ಉಳಿದ 63 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.
ಬಿಜೆಪಿಯ ಪ್ರಬಲ ನಾಯಕರ ವಿರುದ್ದ ಪ್ರಬಲ ಸ್ಪರ್ಧೆ ನೀಡುವಂತ ನಾಯಕರ ಕೊರತೆಯನ್ನು ಕಾಂಗ್ರೆಸ್ಎದುರಿಸುತ್ತಿದೆ ಎನ್ನಲಾಗಿದೆ. ಪದ್ಮನಾಭನಗರ, ಚಿಕ್ಕಮಗಳೂರು, ಶಿಕಾರಿಪುರ, ಚಿಕ್ಕಬಳ್ಳಾಪುರ,
ಇದನ್ನೂ ಓದಿ : https://vijayatimes.com/trouble-for-siddaramaiah/
ಶಿಗ್ಗಾಂವಿ ಸೇರಿದಂತೆ ಉತ್ತರ ಕರ್ನಾಟಕ ಮತ್ತು ಬೆಂಗಳೂರಿನ ಅನೇಕ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು (Karnataka assembly election2023) ಕಾಂಗ್ರೆಸ್ತಯಾರಿ ನಡೆಸಿದೆ.
ಹೆಚ್ಚು ಸ್ಥಾನ ಗೆಲ್ಲುವ ಗುರಿಗಾಗಿ ಪ್ರತಿ ಕ್ಷೇತ್ರವನ್ನೂ ಗಂಭೀರವಾಗಿ ಪರಿಗಣಿಸಿ, ಸೂಕ್ತ ಅಭ್ಯರ್ಥಿಗಾಗಿ ಕಾಂಗ್ರೆಸ್ ಹುಡುಕಾಟ ನಡೆಸಿದೆ.
ಇನ್ನು ಸ್ಕ್ರೀನಿಂಗ್ ಕಮಿಟಿ ಶಿಫಾರಸು ಮಾಡುವ ಪಟ್ಟಿ ಅಂತಿಮಗೊಳಿಸಲು ನವದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಸಲು ಉದ್ದೇಶಿಸಲಾಗಿತ್ತು.
ಆದರೆ, ರಾಹುಲ್ ಗಾಂಧಿ ಅವರ ‘ಸತ್ಯಮೇವ ಜಯತೇ’ ಕಾರ್ಯಕ್ರಮ ಇರುವುದರಿಂದ, ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ಬಳಿಕ ಸಭೆ ನಡೆಸಲು ಉದ್ದೇಶಿಸಲಾಗಿದೆ.
ರಾಹುಲ್ ಗಾಂಧಿ (Rahul Gandhi) ರಾಜ್ಯಕ್ಕೆ ಭೇಟಿ ನೀಡಿದ ನಂತರ ಕಾಂಗ್ರೆಸ್ನ ೨ನೇ ಪಟ್ಟಿ ಏಪ್ರಿಲ್ಮೊದಲನೇಯ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : https://vijayatimes.com/bjp-strategy-in-mysore/
ಅಶೋಕ್ ವಿರುದ್ಧ ಸಿಂಧ್ಯಾ ಸ್ಪರ್ಧೆ?
ಪದ್ಮನಾಭನಗರ ಕ್ಷೇತ್ರಕ್ಕೆ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ (Congres) ಅಭ್ಯರ್ಥಿ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಪದ್ಮನಾಭನಗರ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಗಾಗಿ ಶೋಧ ನಡೆಸಿದ್ದ ಕಾಂಗ್ರೆಸ್ ಪಿಜಿಆರ್ ಸಿಂಧ್ಯಾ ಅವರೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.
ಕೋಲಾರಕ್ಕೆ ಸಿದ್ದು?
ಕೋಲಾರ ಕ್ಷೇತ್ರದಿಂದಲೂ ಸ್ಪರ್ಧೆಗೆ ಸಿದ್ದರಾಮಯ್ಯ (Siddaramaiah) ಒಲವು ತೋರಿದ್ದು, ಈ ಬಾರಿಯೂ ಎರಡು ಕ್ಷೇತ್ರ ಗಳಲ್ಲಿ ಸ್ಪರ್ಧೆಗೆ ಅವಕಾಶಕ್ಕಾಗಿ ಸಿದ್ದರಾಮಯ್ಯ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಈ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ (Randeepsingh Surjewala) ಆಗಲಿ ಅಥವಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಆಗಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇಲ್ಲ.
ರಾಹುಲ್ ಗಾಂಧಿ ನಿರ್ಣಯವೇ ಅಂತಿಮ ಎನ್ನಲಾಗಿದೆ. ರಾಹುಲ್ಗಾಂಧಿಯವರ ರಾಜ್ಯ ಭೇಟಿಯ ನಂತರವೇ ಸಿದ್ದರಾಮಯ್ಯನವರು ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಾರಾ..? ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.