Food Department Eye on Cotton Candy, Gobi, Kebabs, Cakes, Bakery Items
Bengaluru: ಆಹಾರ ವಸ್ತುಗಳಲ್ಲಿ ಕಲಬೆರಕೆ, ರಾಸಾಯನಿಕ ಬಳಕೆ, ಅವಧಿ ಮೀರಿದ ಆಹಾರ ಇತ್ಯಾದಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಆಹಾರ ಇಲಾಖೆ ಕರ್ನಾಟಕದಾದ್ಯಂತ (Karnataka) ವಿಶೇಷ ಕಾರ್ಯಾಚರಣೆ ನಡೆಸಲು ಯೋಜನೆ ರೂಪಿಸಿದೆ.ಈಗಾಗಲೇ ಹೋಟೆಲ್, ರೆಸ್ಟೋರೆಂಟ್ (Hotel, Restaurant), ಬೀದಿ ಬದಿಯ ಆಹಾರ ಅಂಗಡಿಗಳ ವಿರುದ್ಧ ಕಾರ್ಯಾಚರಣೆ ಆರಂಭವಾಗಿದ್ದು ಇಲಾಖೆಯ ಮುಂದಿನ ಗುರಿ ಬೇಕರಿ ತಿನಿಸುಗಳಾಗಿವೆ.
ಡಾಲ್ಡಾ, ಕೊಳಕು ಎಣ್ಣೆ ಬಳಸಿ ತಯಾರಿಸಿದ ಬೇಕರಿಯ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಮೊದಲಿಗೆ ಸಾಮಾನ್ಯವಾಗಿ ಜನರು ಹೆಚ್ಚು ಸೇವನೆ ಮಾಡುವ ಕೇಕ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಕೇಕ್‌ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್ (Cocoa Powder, Cream)ಗಳಿಗೆ ಬಳಸುವ ಪದಾರ್ಥಗಳು, ಫ್ಲೇವರ್‌ಗಳು ಹಾಗೂ ಬಣ್ಣ ಬಣ್ಣವಾಗಿಸಲು ಬಳಸುವ ಕಲರ್‌ಗಳನ್ನ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ.
ಬ್ಲೂ ಬೆರ್ರಿ, ಪೈನಾಪಲ್, ರೆಡ್ ವೆಲ್ವೆಟ್, ಚಾಕೋಲೇಟ್ (Blue Berry, Pineapple, Red Velvet, Chocolate) ಸೇರಿದಂತೆ ವಿವಿಧ ಫ್ಲೇವರ್‌ಗಳನ್ನ ಜನರು ಇಷ್ಟ ಪಡುವುದರಿಂದ ಅವುಗಳ ತಯಾರಿಕೆ ಅಥವಾ ಅದಕ್ಕೆ ಹಾಕುವ ಪದಾರ್ಥಗಳು ಜನರು ಆರೋಗ್ಯಕ್ಕೆ ಪೂರಕವಾ ಅಥವಾ ಮಾರಕವಾ ಎಂಬುದನ್ನು ತಿಳಿಯಲು ಮುಂದಾಗಿದೆ.
ಈಗಾಗಲೇ ಆಹಾರ ಇಲಾಖೆ ಅಧಿಕಾರಿಗಳು ಸುಮಾರು 264 ಕಡೆಗಳಲ್ಲಿ ಕೇಕ್‌ಗಳ ಸ್ಯಾಂಪಲ್ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿದ್ದು. ಇದರ ವರದಿಗೆ ಇಲಾಖೆ ಕಾಯುತ್ತಿದೆ. ಒಂದು ವೇಳೆ, ವರದಿ ಪಾಸಿಟಿವ್ ಬಂದಿದ್ದೇ ಆದಲ್ಲಿ ಕೆಲವೊಂದು ಪದಾರ್ಥಗಳ ಮೇಲೆ ನಿರ್ಬಂಧ ಹೇರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೇಕ್ ತನ್ನ ಮೂಲ ಸ್ವಾದವನ್ನು ಕಳೆದುಕೊಳ್ಳಲಿದೆ.
ಇನ್ನು ಆಹಾರ ಸರಕ್ಷತಾ ಹಾಗೂ ಆರೋಗ್ಯ ಇಲಾಖೆ ಸರಣಿ ರೇಡ್‌ಗಳು ಹಾಗೂ ಆಹಾರಗಳಿಗೆ ಬಳಸುವ ಕೆಲವೊಂದು ಪದಾರ್ಥಗಳಿಗೆ ನಿರ್ಬಂಧ ವಿಧಿಸುತ್ತಿರುವುದನ್ನು ಬೇಕರಿ ಮಾಲೀಕರ ಸಂಘಟನೆ ಸ್ವಾಗತ ಮಾಡಿದೆ. ನಾವು ಸಹಜ ಕಲರ್ ಬಳಕೆ ಮಾಡುತ್ತೇವೆ. ಕೆಮಿಕಲ್ (Chemical) ಬಳಕೆ ಮಾಡಲ್ಲ. ಇನ್ನು ಬಳಕೆ ಮಾಡುವವರ ವಿರುದ್ಧ ಆಹಾರ ಇಲಾಖೆಯ ಕ್ರಮ ಸರಿಯಾಗಿದೆ ಎಂದು ಬೇಕರಿ ಮಾಲೀಕರು ಹೇಳಿದ್ದಾರೆ.
Karnataka Ban Cakes in Kannada Post
Bengaluru: The food department has planned to conduct a special operation against food adulteration, use of chemicals, expired food etc. are foods.
Dalda, the department is preparing to ban the bakery food made using dirty oil. In addition to this, the cakes which are commonly consumed by people are being monitored first. The colors used for coloring are under scrutiny.
As people like various flavors including Blue Berry, Pineapple, Red Velvet, Chocolate (Blue Berry, Pineapple, Red Velvet, Chocolate), people have come to know whether their preparation or the ingredients put in it are beneficial or harmful to health.
Food department officials have already taken samples of cakes from around 264 places and sent them to the laboratory. The department is waiting for the report. If the report comes positive, restrictions will be imposed on certain ingredients, said Health Minister Dinesh Gundurao. Thus, the cake will lose its original taste in the coming days.
The bakery owners’ organization has welcomed the Food Safety and Health Department’s series of raids and restrictions on certain ingredients used in food. We use natural color. Chemicals are not used. The owner of the bakery said that the action of the food department against the users is correct.