ಮಾರ್ಚ್ 22 ರಂದು ಕರ್ನಾಟಕ ಬಂದ್ (Karnataka bandh on March 22)
ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಬಂದ್
ಸಾರಿಗೆ ಇಲಾಖೆಯಿಂದ ಕೂಡ ಬಂದ್ ಗೆ ಬೆಂಬಲ
Bangalore: ಬೆಳಗಾವಿಯಲ್ಲಿ ಕರ್ನಾಟಕದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ (Vatal Nagaraj) ಹೇಳಿದ್ದಾರೆ.ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಮರಾಠಿ ಮಾತನಾಡುವಂತೆ ಗಲಾಟೆ ತೆಗೆದು ಹಲ್ಲೆ ನಡೆಸಿದ್ದರು,ಈ ಸುದ್ಧಿ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು.
ಜೊತೆಗೆ ಕರ್ನಾಟಕದ ಬಸ್ ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳೆದು ವಿಕೃತಿ ಮೆರೆದಿದ್ದರು.ರಾಜ್ಯ ಕನ್ನಡಪರ ಸಂಘಟನೆಗಳು (Pro-Kannada state organizations) ಇಂದು ಬೆಂಗಳೂರಿನಲ್ಲಿ ಸಭೆ ಸೇರಿ ಬಂದ್ ವಿಚಾರವಾಗಿ ಚರ್ಚಿಸಿದ್ದಾರೆ. ‘ಅಖಂಡ ಕರ್ನಾಟಕ ಬಂದ್’ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಚರ್ಚೆ ನಡೆದಿದೆ. ಎಲ್ಲ ಕನ್ನಡ ಪರ ನಾಯಕರು, ಕಾರ್ಯಕರ್ತರು ಅಖಂಡ ಕರ್ನಾಟಕ ಬಂದ್ಗೆ ಮಾಡಲು ಮುಂದಾಗಿದ್ದಾರೆ. ಕರ್ನಾಟಕ ಬಂದ್ಗೆ ಸಾರಿಗೆ ಇಲಾಖೆಯ ಬೆಂಬಲ ಕೂಡ ಇದೆ ಎನ್ನಲಾಗ್ತಿದೆ.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಖಾಸಗಿ ಹೋಟೆಲ್ ನಲ್ಲಿ ಸಭೆ ಕರೆಯಲಾಗಿತ್ತು.ಸಭೆಯಲ್ಲಿ ಮರಾಠಿ ಪುಂಡರ (Marathi Pundara) ಪುಂಡಾಟಿಕೆ,ಮರಾಠಿಗರ ಅಟ್ಟಹಾಸ, ಎಂ.ಇ.ಎಸ್ ನಿಷೇದ ಮಾಡಬೇಕು,ಕಳಾಸ ಭಂಡೂರಿ ಯೋಜನೆ ಆರಂಭ, ಹಿಂದಿ ಹೇರಿಕೆ ಬೇಡವೇ ಬೇಡ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ರವರು “ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ, ಬಂದ್ ಮಾಡಿಯೇ ಮಾಡುತ್ತೇವೆ,” ಎಂದು ಘೋಷಣೆ ಮಾಡಿದ್ದಾರೆ.’ಹೊರರಾಜ್ಯ, ಸಂಸತ್ ಗಮನ ಸೆಳೆಯಲು ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಹೊಡೆಯುತ್ತಿದ್ದಾರೆ.
ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಮರಾಠಿ ಪುಂಡರು ಕೆಎಸ್ಆರ್ಟಿಸಿ ಚಾಲಕ, ನಿರ್ವಾಕರ ಮುಖಕ್ಕೆ ಮಸಿ ಬಳಿಯುವುದಲ್ಲದೆ ಹಲ್ಲೆ ಕೂಡ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ ಎಂದು ಹೇಳಿದ್ದಾರೆ.ಬಂದ್ ಗೆ ನೈತಿಕ ಬೆಂಬಲ ಸೂಚಿಸಿರುವ ಸಂಘಟನೆಗಳ ವಿರುದ್ಧವೂ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಅನೇಕ ಕನ್ನಡಪರ ಸಂಘಟನೆಗಳು ನಮಗೆ ಬೆಂಬಲ ಕೊಟ್ಟಿದೆ. ನಾವು ಮಾರ್ಚ್ 22ರಂದು ಬಂದ್ ಮಾಡುತ್ತೇವೆ. ಇನ್ನೂ 3 ದಿನಗಳ ಕಾಲಾವಕಾಶವಿದೆ. ಬಂದ್ ಸಂಪೂರ್ಣ ಯಶಸ್ವಿಯಾಗಲಿದೆ.
ಮಾರ್ಚ್ 22 ರಂದು ಬೆಳಿಗ್ಗೆ 6 ರಿಂದ ಸಂಜೆ 6 ವರೆಗೆ ಬಂದ್ ನಡೆಯಲಿದೆ.ಬೆಳಿಗ್ಗೆ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಆಸ್ಪತ್ರೆ ಮತ್ತು ಅಗತ್ಯ ಸೇವೆಗಳನ್ನು ಹೊರೆತುಪಡಿಸಿ ಉಳಿದ ಎಲ್ಲಾ ಸೇವೆಗಲು ಬಂದ್ ಆಗಲಿವೆ. (Karnataka bandh on March 22) ಹೋಟೆಲ್ ನವರು ಸಹ ನಮಗೆ ಬೆಂಬಲ ನೀಡಿ ಬಂದ್ ಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.