ಕಾವೇರಿದ ಬಂದ್ ಬಿಸಿ: ಸಿಎಂ ನಿವಾಸಕ್ಕೆ ಮುತ್ತಿಗೆ ಎಚ್ಚರಿಕೆ ಹಿನ್ನಲೆ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​

Bengaluru: ಸುಪ್ರೀಂ ಕೋರ್ಟ್​ (Supreme Court) ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿದ್ದ ಆದೇಶವನ್ನ (Karnataka Bandh) ವಿರೋಧಿಸಿ ಇಂದು (ಸೆ.29) ರೈತಪರ ಸಂಘಟನೆಗಳು

ಕರ್ನಾಟಕ ಬಂದ್​ಗೆ ಕರೆ ನೀಡಿದ್ದರು. ಜೊತೆಗೆ ಕನ್ನಡ ಪರ ಸಂಘಟನೆಗಳು ಸಿಎಂ (Karnataka CM)ನಿವಾಸಕ್ಕೆ ಮುತ್ತಿಗೆ ಎಚ್ಚರಿಕೆ ನೀಡಿದ್ದರು. ಹಾಗಾಗಿ ಸಿಎಂ ಸಿದ್ದರಾಮಯ್ಯ (Siddramaiah) ನಿವಾಸದ ಬಳಿ

ಹೆಚ್ಚಿನ ಬಿಗಿ ಪೊಲೀಸ್ ಭದ್ರತೆಯನ್ನು ಅಳವಡಿಸಲಾಗಿದೆ.

ಸಿಎಂ ನಿವಾಸ ಕಾವೇರಿ ಹಾಗೂ ಕಚೇರಿ ಕೃಷ್ಣಾ ಬಳಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದ್ದು, 3 ಕೆ ಎಸ್ ಆರ್ ಪಿ ತುಕಡಿಗಳು (KSRP contingents), ವಾಟರ್ ಜೆಟ್ ವಾಹನ ಸೇರಿ 30 ಹೆಚ್ಚುವರಿ

ಪೊಲೀಸ್ ನಿಯೋಜಿಸಲಾಗಿದೆ. ಹೌದು, ಬಂದ್​ ಹಿನ್ನಲೆ ಸಿಎಂ ಮನೆ ಮುಂದೆ ಭದ್ರತೆ ಅಳವಡಿಸಲಾಗಿತ್ತು. ಆದರೆ, ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಸಿಎಂ ನಿವಾಸ ಮತ್ತು ಗೃಹ ಕಛೇರಿ ಬಳಿ ಬಿಗಿ ಪೊಲೀಸ್

ಬಂದೋಬಸ್ತ್ ಮಾಡಿ ದಿಢೀರ್‌ ಪೊಲೀಸ್ ಭದ್ರತೆಯನ್ನು ಅಧಿಕಾರಿಗಳು ಹೆಚ್ಚಿಸಿದ್ದಾರೆ.

ಜೊತೆಗೆ ಸಿಎಂ ನಿವಾಸಕ್ಕೆ ಡಿಜಿಪಿ ಅಲೋಕ್ ಮೋಹನ್ (DGP Alok Mohan) ಮತ್ತು ಪೊಲೀಸ್ ಆಯುಕ್ತ ದಯಾನಂದ ಆಗಮಿಸಿ, ಬಂದ್ ಪರಿಸ್ಥಿತಿ ಬಗ್ಗೆ ಹಾಗೂ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದು,

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಬಂದ್ ಹಿನ್ನಲೆ ಕಾನೂನು ಸುವ್ಯವಸ್ಥೆಯ ಕಡೆ ಹೆಚ್ಚು ಗಮನ ನೀಡುವಂತೆ ಸೂಚಿಸಿದ್ದಾರೆ. ಪ್ರತಿ ಜಿಲ್ಲೆಯ ಬಂದ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಗೂ ತಟ್ಟಿದ ಕಾವೇರಿ ಕಿಚ್ಚು. ಬೈಕ್ ರಾಲಿ (Bike Rally) ಮೂಲಕ ತೆರಳುತ್ತಿದ್ದ ಕನ್ನಡಪರ ಹೋರಾಟಗಾರು, ಈ ವೇಳೆ ಕೆಪಿಸಿಸಿ ಕಚೇರಿ ಎದುರು ಬೈಕ್ ನಿಲ್ಲಿಸಿ ಕನ್ನಡಪರ

ಸಂಘಟನೆಗಳುಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದ್ದಾರೆ.

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಣ್ಣಪುಟ್ಟ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಬಂದ್‍ನಲ್ಲಿ (Karnataka Bandh) ಯಾರು ಬೇಕಾದರೂ

ಭಾಗವಹಿಸಬಹುದು. ಸ್ವಪ್ರೇರಣೆಯಿಂದ ಬಂದ್ ಮಾಡಬೇಕು. ಒಂದು ವೇಳೆ ಯಾರಾದರೂ ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಲು ಯತ್ನಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ

ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಎಚ್ಚರಿಸಿದ್ದಾರೆ.

ಇದನ್ನು ಓದಿ: ಬಂದ್ ಮಾಡುವುದರಿಂದ ಉಪಯೋಗವಿಲ್ಲ, ರಾಜ್ಯದ ಹಿತ ಕಾಪಾಡಬೇಕು ಪ್ರತಿಭಟನಕಾರರಿಗೆ ಗೃಹ ಸಚಿವ ಪರಮೇಶ್ವರ್ ಮನವಿ

Exit mobile version