ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಇಂದು ಮಂಡಿಸಿರುವ (Karnataka Budget 2024) ರಾಜ್ಯ ಬಜೆಟ್ನ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ.
• 2024-25ನೇ ಸಾಲಿನ ಬಜೆಟ್ನಲ್ಲಿ ವಿಶ್ವಗುರು ಬಸವಣ್ಣನವರ (Basavanna) ಹೆಸರಿನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ.
• ವಿಶ್ವಗುರು ಜಗಜ್ಯೋತಿ ಬಸವೇಶ್ವರನವರನ್ನು ಕರ್ನಾಟಕ (Karntaka) ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಹೀಗಾಗಿ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿರುವ
ವಿಶ್ವಗುರು ಜಗಜ್ಯೋತಿ ಬಸವಣ್ಣನವರ (Karnataka Budget 2024) ಭಾವಚಿತ್ರ ಹಾಕಬೇಕು.
• ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಮಂಟಪವನ್ನು ಕಲಬುರಗಿಯಲ್ಲಿ (Kalburgi) ಸ್ಥಾಪಿಸಲಾಗುವುದು.
• ವಚನ ಸಾಹಿತ್ಯ ಕುರಿತು ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಮತ್ತು ಕಾಲೇಜುಗಳಲ್ಲಿ (College) ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
• ಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿಯ ಅಭಿವೃದ್ಧಿಗೆ ಬಸವನಬಾಗೇವಾಡಿ (Basavanabagevaadi) ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು.
• ಮಂಗಳೂರಿನ (Mangaluru) ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲ ಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸುವುದಾಗಿ ಸಿಎಂ
ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ ಮೊದಲ ಜಲ ಮೆಟ್ರೋ ಸೇವೆ ಕೇರಳದಲ್ಲಿ ಕಳೆದ ವರ್ಷ ಶುರುವಾಗಿತ್ತು. ಪ್ರಧಾನಿ ಮೋದಿ ವಾಟರ್ ಮೆಟ್ರೋ (Modi Water Metro) ಯೋಜನೆಯನ್ನು
ಏಪ್ರಿಲ್ 25ರಂದು ಉದ್ಘಾಟಿಸಿದ್ದರು.
• ಬಜೆಟ್ ನಲ್ಲಿ ಡೀಪ್ ಫೇಕ್ (Deep Fake)ವಿರುದ್ಧ ಸಮರ ಸಾರಿದ್ದು, ಡೀಪ್ ಫೇಕ್ ನಂತ ಸೈಬರ್ ಅಪರಾಧಗಳ ವಿರುದ್ದ ಕ್ರಮಕ್ಕೆ 43 ಸಿಇಎನ್ ಪೊಲೀಸ್ ಠಾಣೆ ಉನ್ನತಿಕರಣಕ್ಕೆ
ನಿರ್ಧಾರ ಮಾಡಲಾಗಿದೆ.
• ರಾಜ್ಯದ ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಹಾಗೂ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.
• ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂಪಾಯಿ.
• ಕ್ರಿಶ್ಚಿಯನ್ (Cristian) ಸಮುದಾಯದ ಅಭಿವೃದ್ಧಿಗೆ 200 ಕೋಟಿ
• ಜೈನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ
• ಬೀದರ್ ಶ್ರೀನಾನಕ್ ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ
ಇದನ್ನು ಓದಿ: ರಾಜ್ಯ ಬಜೆಟ್ 2024 : ಪ್ರಮುಖ ಮುಖ್ಯಾಂಶಗಳು